ಚಿತ್ರ- ಉಮಾಪ್ರಸಾದ್ ರೈ ನಡುಬೈಲು
ಪುತ್ತೂರು: ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಂದರ್ಭದಲ್ಲಿ ಫೆ. 8ರಂದು ರಾತ್ರಿ ದೇವಾಲಯದ ಸಮೀಪದ ಉಳ್ಳಾಲ್ತಿ ದೈವಸ್ಥಾನದಲ್ಲಿ ಉಳ್ಳಾಲ್ತಿ ದೈವದ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಕವಿತಾ ವಿ.ಶೆಟ್ಟಿ ಮತ್ತು ದೇಷ್ನಾ ಶೆಟ್ಟಿ ಬೆಂಗಳೂರುರವರ ಸೇವಾರ್ಥವಾಗಿ ಅನ್ನಸಂತರ್ಪಣೆ ನಡೆಯಿತು.
ದೇವಾಲಯದ ಆಡಳಿತದಾರರಾದ ಸವಣೂರುಗುತ್ತು ಡಾ. ರತ್ನಾಕರ ಶೆಟ್ಟಿ ಮತ್ತು ಕುಟುಂಬಸ್ಥರು, ಆಡಳಿತ ಸಮಿತಿಯ ಅಧ್ಯಕ್ಷ ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ಉತ್ಸವ ಸಮಿತಿಯ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು, ದೇವಾಲಯದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯ, ಅರ್ಚಕ ನಾರಾಯಣ ಬಡೆಕಿಲ್ಲಾಯ, ಜ್ಯೋತಿಷಿ ವಿಶ್ವಮೂರ್ತಿ ಬಡೆಕಿಲ್ಲಾಯ, ಉತ್ಸವ ಸಮಿತಿಯ ಕೋಶಾಧಿಕಾರಿ ರವೀಂದ್ರನಾಥ ರೈ ನೊಲ್ಮೆ, ಉಪಾಧ್ಯಕ್ಷ ಗಂಗಾಧರ್ ಸುಣ್ಣಾಜೆ, ಕಾರ‍್ಯದರ್ಶಿ ದಯಾನಂದ ಮಾಲೆತ್ತಾರು, ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷ ಶ್ರೀಧರ ಸುಣ್ಣಾಜೆ, ಪ್ರಧಾನ ಕಾರ‍್ಯದರ್ಶಿ ರಾಘವ ಗೌಡ ಸವಣೂರು, ಸವಣೂರು ಗ್ರಾಮ ದೈವ ಜೀರ್ಣೋದ್ಧಾರ ಸಮಿತಿಯ ಮಾಜಿ ಅಧ್ಯಕ್ಷ ಪ್ರಮೋದ್ ಕೆ.ಆರ್ ಕೋಡಿಬೈಲು, ನಿಕಟಪೂರ್ವಾಧ್ಯಕ್ಷ ಪ್ರಜ್ವಲ್ ಕೆ.ಆರ್.ಕೋಡಿಬೈಲು, ಅಧ್ಯಕ್ಷ ಪುರಂದರ ಬಾರಿಕೆ, ಬೆಳಿಯಪ್ಪ ಗೌಡ ಚೌಕಿಮಠ ಸಹಿತ ಸಾವಿರಾರು ಮಂದಿ ಭಾಗವಹಿಸಿದರು.
ಉಳ್ಳಾಲ್ತಿ ದೈವದ ನೇಮೋತ್ಸವ-ಅಚ್ಚುಕಟ್ಟಾದ ವ್ಯವಸ್ಥೆ
ಸವಣೂರು-ಬೆಳ್ಳಾರೆ ರಸ್ತೆಯ ಪರಣೆಯಿಂದ ಒಂದು ಕಿ.ಮೀ ದೂರದಲ್ಲಿ ಪ್ರಕೃತಿ ರಮಣೀಯ ಪ್ರದೇಶದಲ್ಲಿ ಕಂಗೊಳಿಸುತ್ತಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ಜಾತ್ರೋತ್ಸವದ ಪ್ರಯುಕ್ತ ಜರಗಿದ ಉಳ್ಳಾಲ್ತಿ ದೈವದ ನೇಮೋತ್ಸವದಲ್ಲಿ ಊರ-ಪರವೂರ ಸಾವಿರಾರು ಭಕ್ತಾದಿಗಳು ಆಗಮಿಸಿದರು.