ಪುತ್ತೂರು: ಹನುಮಗಿರಿ ಕ್ಷೇತ್ರದಲ್ಲಿ ದೇಶಪೂಜನ ಕಲ್ಪನೆಯ ಶ್ರೀಭಾರತಿ ಅಮರಜ್ಯೋತಿ ಮಂದಿರ ಅಮರಗಿರಿಯ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಫೆ.11ರಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಹೆಲಿಕಾಪ್ಟರ್ ಮೂಲಕ ಕಣ್ಣೂರಿನಿಂದ ಆಗಮಿಸಲಿದ್ದಾರೆ.
ಈ ಹಿನ್ನಲೆಯಲ್ಲಿ ಹನುಮಗಿರಿಯ ಗಜಾನನ ವಿದ್ಯಾಸಂಸ್ಥೆಯಲ್ಲಿ ಹೆಲಿಪ್ಯಾಡ್‌ನಿರ್ಮಿಸಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮ ಫೆ.9ರಂದು ನಡೆಯಿತು. ಹನುಮಗಿರಿ ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಯುತ ಮೂಡೆತ್ತಾಯರವರು ತೆಂಗಿನ ಕಾಯಿ ಒಡೆದು ಉದ್ಘಾಟಿಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ರಾಜಾರಾಮ್, ವಿ.ಹಿಂ.ಪಂ.ನ ಜಗದೀಶ್ ಶೇಣವ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಅಪ್ಪಯ್ಯ ಮಣಿಯಾಣಿ, ಚಂದ್ರಶೇಖರ್ ಬಪ್ಪಳಿಗೆ, ಹನುಮಗಿರಿ ಕ್ಷೇತ್ರದ ಧರ್ಮದರ್ಶಿ ಶಿವರಾಮ್ ಪಿ., ಪುತ್ತೂರು ಪದ್ಮಶ್ರೀ ಗ್ರೂಪ್‌ನ ಸೀತಾರಾಮ ರೈ ಕೆದಂಬಾಡಿಗುತ್ತು, ಕಾವು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ರಮೇಶ್ ಪೂಜಾರಿ ಮುಂಡ್ಯ ಉಪಸ್ಥಿತರಿದ್ದರು. ಅರ್ಚಕ ರಾಜೇಶ್ ಗಾಂವ್ಕರ್ ಪ್ರಾರ್ಥಿಸಿದರು. ಹನುಮಗಿರಿ ಕ್ಷೇತ್ರದ ಸಿಬಂದಿಗಳು ಉಪಸ್ಥಿತರಿದ್ದರು.