ಪುತ್ತೂರು: ಕಾರಣಿಕ ಕ್ಷೇತ್ರ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ ಅಂಗವಾಗಿ ಫೆ. 9 ರಂದು ಬಿಂಬಶುದ್ಧಿ, ಕಲಶ ಪೂಜೆ, ಅನುಜ್ಞಾ ಕಲಶಾಭಿಷೇಕ ನಡೆಯಿತು.
ಗುರುವಾರ ಬೆಳಿಗ್ಗೆ ಮಹಾಗಣಪತಿ ಹೋಮ, ಬಿಂಬಶುದ್ಧಿ, ಕಲಶಪೂಜೆ, ಅನುಜ್ಞಾ ಕಲಶ ಪೂಜೆ, ಸಂಹಾರ ತತ್ತ್ವ ಹೋಮ, ತತ್ತ್ವ ಕಲಶಪೂಜೆ ನಡೆಯಿತು. ಇದರೊಂದಿಗೆ ಬಾಲಾಲಯ ಪ್ರತಿಷ್ಠೆಗೆ ಪೂರ್ವಭಾವಿಯಾಗಿ ಗ್ರಾಮಸ್ಥರು ಜೊತೆಗೂಡಿ ಪ್ರಾರ್ಥನೆ ಸಲ್ಲಿಸಲಾಯಿತು.
ಮಧ್ಯಾಹ್ನ ಅನುಜ್ಞಾ ಕಲಶಾಭಿಷೇಕ, ತತ್ತ್ವಕಲಶಾಭಿಷೇಕ, ಧ್ಯಾನ ಸಂಕೋಚಕ್ರಿಯೆ, ಜೀವಕಲಶಪೂಜೆ, ಜೀವೋದ್ವಾಸನೆ, ಶಯ್ಯಾಪೂಜೆ ಜರಗಿತು. ರಾತ್ರಿ ಧ್ಯಾನಾಧಿವಾಸ ಕ್ರಿಯೆ, ಅಧಿವಾಸ ಹೋಮ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯ ಕ್ಷರು, ಸದಸ್ಯರು ಉಪಸ್ಥಿತರಿದ್ದರು.
ದೇವಳದಲ್ಲಿ ಇಂದು: ಫೆ. 10ರಂದು ಬೆಳಿಗ್ಗೆ 7ರಿಂದ ಮಹಾಗಣಪತಿ ಹೋಮ, 9.24ರಿಂದ 10.30ರ ಮೀನ ಲಗ್ನದಲ್ಲಿ ಬಾಲಾಲಯ ಪ್ರತಿಷ್ಠೆ, ಜೀವಕಲಶಾಭಿಷೇಕ, ಮಹಾಪೂಜೆ ನಡೆಯಲಿದೆ.