ಅಮಿತ್ ಶಾ ಭೇಟಿ ಹಿನ್ನಲೆ – ಫೆ.11:ಮದ್ಯದಂಗಡಿ ಬಂದ್

0

ಪುತ್ತೂರು:ಫೆ.11ರಂದು ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುತ್ತೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಫೆ.11ರಂದು ಅಪರಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮದ್ಯದಂಗಡಿಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.
ಭದ್ರತೆ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪುತ್ತೂರು ವಲಯ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯ/ಶೇಂದಿ ಮಾರಾಟ/ದಾಸ್ತಾನು/ಸಾಗಾಣಿಕೆಯನ್ನು ನಿರ್ಬಂಧಿಸಲಾಗಿದ್ದು ಎಲ್ಲಾ ರೀತಿಯ ಮದ್ಯ / ಶೇಂದಿ ಅಂಗಡಿಗಳನ್ನು ಫೆ.11ರಂದು ಅಪರಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಮುಚ್ಚುವಂತೆ ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ರವರು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here