ವಿಟ್ಲ: ಖಾಸಗಿ ಬಸ್ ಅಪಘಾತ – ಪ್ರಯಾಣಿಕರಿಗೆ ಗಾಯ

0

ವಿಟ್ಲ: ಖಾಸಗಿ ಬಸ್ಸೊಂದು ಅಪಘಾತ ಸಂಭವಿಸಿದ ಘಟನೆ ವಿಟ್ಲ ಸಮೀಪದ ಕೆಲಿಂಜ ಎಂಬಲ್ಲಿ ನಡೆದಿದೆ.

ವಿಟ್ಲದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಕೆಲಿಂಜ ಸಮೀಪ ರಸ್ತೆಬದಿಗೆ ಸರಿದು ಅಪಘಾತ ಸಂಭವಿಸಿದೆ. ಘಟನೆಯಿಂದಾಗಿ ಬಸ್ಸಿನಲ್ಲಿದ್ದ ಪ್ರಯಾಣಿಕರ ಪೈಕಿ ಓರ್ವ ಯುವತಿಯ ಕಾಲಿಗೆ ಗಂಭೀರ ಗಾಯವಾಗಿದ್ದು ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕಾಗಮಿಸಿದ ವಿಟ್ಲ ಠಾಣಾ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಗಾಯಾಳು ಯುವತಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here