ಸವಣೂರು : ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ ಮತ್ತು ಕಂಪಾನಿಯೋ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನಾ ಸಮಾರಂಭ ಸವಣೂರು ಯುವ ಸಭಾಭವನದಲ್ಲಿ ನಡೆಯಿತು.
ಶಿಬಿರವನ್ನು ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಅವರು ಉದ್ಘಾಟಿಸಿದರು. ಸವಣೂರು ಯುವಕ ಮಂಡಲದ ಅಧ್ಯಕ್ಷ ಪ್ರಕಾಶ್ ಮಾಲೆತ್ತಾರು ಅವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ,ಪುತ್ತೂರು ಎಪಿಎಂಸಿಯ ಮಾಜಿ ಅಧ್ಯಕ್ಷ ದಿನೇಶ್ ಮೆದು, ಸವಣೂರು ಗ್ರಾ.ಪಂ.ಸದಸ್ಯ ಗಿರಿಶಂಕರ ಸುಲಾಯ, ಸವಣೂರು ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ.ಸವಣೂರು ಉಪಸ್ಥಿತರಿದ್ದರು.
ಫೂಟ್ ಪಲ್ಸ್ ಥೆರಪಿ ಶಿಬಿರವು ಫೆ.24ರವರೆಗೆ ಬೆಳಿಗ್ಗೆ 9.30 ರಿಂದ ಸಂಜೆ 4.30ರವರೆಗೆ ನಡೆಯಲಿದೆ.
ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ನ ಪ್ರಭಾಕರ ಸಾಲಿಯಾನ್ ಅವರು ಸ್ವಾಗತಿಸಿ, ಕೀರ್ತನ್ ಖೋಡಿಬೈಲು ವಂದಿಸಿದರು.ಜಿತಾಕ್ಷ ಜಿ. ಕಾರ್ಯಕ್ರಮ ನಿರೂಪಿಸಿದರು.