ಫೆ. 14 ರಿಂದ ಫೆ. 19: ಕಡಬದಲ್ಲಿ ದ್ವಾದಶ ಜ್ಯೋತಿರ್ಲಿಂಗ ದರ್ಶನ

0


ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಕಡಬ ಆಯೋಜನೆಯಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ಕ್ಷೇತ್ರದಲ್ಲಿ ಫೆ. 14ರಿಂದ ಫೆ. 19ರ ವರೆಗೆ ಬೆಳಿಗ್ಗೆ 9.00ರಿಂದ ರಾತ್ರಿ 8.00ರ ವರೆಗೆ ನಡೆಯಲಿದೆ.


ಫೆ. 14ರಂದು ಸಂಜೆ 4.00 ಗಂಟೆಗೆ ಕಡಬ ಬ್ರಹ್ಮ ಕುಮಾರಿ ಈಶ್ವರೀಯ ವಿದ್ಯಾಲಯದ ಸಂಚಾಲಕರಾದ ರಾಜಯೋಗಿನಿ ಬ್ರಹ್ಮ ಕುಮಾರಿ ರತ್ನಾಜೀಯವರ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಆದಿಚುಂಚನಗಿರಿ ಸಂಸ್ಥಾನದ ಮಂಗಳೂರು ಶಾಖಾ ಮಠದ ಸ್ವಾಮಿಗಳಾದ ಪರಮಪೂಜ್ಯ ಡಾ. ಧರ್ಮಪಾಲನಾಥ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬ್ರಹ್ಮ ಕುಮಾರಿಯ ಈಶ್ವರೀಯ ವಿದ್ಯಾಲಯ ಮಂಗಳೂರು ಇದರ ಸಂಚಾಲಕರಾದ ರಾಜಯೋಗಿನಿ ಬ್ರಹ್ಮ ಕುಮಾರಿ ವಿಶ್ವೇಶ್ವರೀಜೀ ಈಶ್ವರೀಯ ಸಂದೇಶ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಕರ್ನಾಟಕ ಸರಕಾರದ ಮಾಜಿ ಅರಣ್ಯ ಸಚಿವ ಬಿ. ರಮಾನಾಥ ರೈ, ಕಡಬ ವಿಶ್ವಹಿಂದೂ ಪರಿಷತ್ ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ, ಮಾಜಿ ಜಿ.ಪಂ‌. ಸದಸ್ಯ ಕೃಷ್ಣ ಶೆಟ್ಟಿ ಕಡಬ, ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸೀತಾರಾಮ ಗೌಡ, ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಉಪನ್ಯಾಸಕ ಎ.‌ ಮಾಧವ ಆಚಾರ್ಯ, ವೈದ್ಯರತ್ನಶ್ರೀ ರಾಜ್ಯಪ್ರಶಸ್ತಿ ಪುರಸ್ಕೃತ ಇ.ಎಸ್. ವಾಸುದೇವ ಇಡ್ಯಾಡಿ ಮತ್ತು ಕಡಬ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಹರೀಶ್ ಆರ್. ಭಾಗವಹಿಸಲಿದ್ದಾರೆ. ಪರಪ್ಪನಹಳ್ಳಿ ಬ್ರಹ್ಮ ಕುಮಾರಿಯ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕಿ ರಾಜಯೋಗಿನಿ ಬ್ರಹ್ಮ ಕುಮಾರಿ ಸುಮಂಗಲ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ. ಬೆಳಿಗ್ಗೆ 11.00 ಗಂಟೆಗೆ ಶಿವಶಕ್ತಿ ಮಹಿಳೆಯನ್ನು ಯಕ್ಷಗಾನ ಮಂಡಳಿ ಮಂಗಳೂರು ಇವರಿಂದ ಆಧ್ಯಾತ್ಮಿಕ ಯಕ್ಷಗಾನ ತಾಳಮದ್ದಳೆ ಶಿವ ಅವತಾರ ಮತ್ತು ವಿಶ್ವಮೋಹನ ನೃತಕಲಾ ಶಾಲಾ ಮಕ್ಕಳಿಂದ ಸೃಷ್ಟಿಯ ಆದಿ-ಮಧ್ಯ-ಅಂತ್ಯದ ರಹಸ್ಯ ಸಾರುವ ನೃತ್ಯ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here