ಪುತ್ತೂರು: ಪುತ್ತೂರು ರೈಲ್ವೇ ನಿಲ್ದಾಣದ ಸಮೀಪ ಹಳಿಯ ಬಳಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಫೆ.12ರಂದು ಪತ್ತೆಯಾಗಿದೆ.
ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂನಿಂದ ಎಡಕ್ಕೆ ಎಪಿಎಂಸಿ ರೈಲ್ವೇ ಗೇಟ್‌ಗೆ ಸಮೀಪವಿರುವ ರೈಲ್ವೇ ನಾಮಫಲದ ಪಕ್ಕದಲ್ಲಿರುವ ಪೊದೆಯಲ್ಲಿ ಶವ ಪತ್ತೆಯಾಗಿದೆ. ಶವ ಕೊಳೆತ ಸ್ಥಿತಿಯಲ್ಲಿದ್ದರಿಂದ ಗುರುತು ಪತ್ತೆಯಾಗಿಲ್ಲ. ಕಾಲಿನಲ್ಲಿ ಗೆಜ್ಜೆ, ಸೀರೆ ಮೇಲ್ನೊಟಕ್ಕೆ ಕಾಣಿಸುತ್ತಿದ್ದು, ತಲೆ ಭಾಗ ಯಾವುದೋ ಪ್ರಾಣಿ ತಿಂದಿರುವಂತೆ ಮತ್ತು ಹುಳವಾಗಿರುವುದರಿಂದ ಮುಖ ಪರಿಚಯ ಸಿಗುತ್ತಿಲ್ಲ. ಸುಮಾರು 35 ರಿಂದ 40 ವರ್ಷದ ಮಹಿಳೆ ಆಗಿರಬಹುದೆಂದು ಊಹಿಸಲಾಗಿದ್ದು, ಎರಡು ಮೂರು ದಿನದ ಹಿಂದೆಯೇ ಮಹಿಳೆ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಮತ್ತು ರೈಲ್ವೇ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಫಾರೆನ್ಸಿಕ್ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.