ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ಮಹಾದೇವ ದೇವಸ್ಥಾನದ ವಿಜ್ಞಾಪನಾ ಪತ್ರ ಬಿಡುಗಡೆ

0

ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ಮಹಾದೇವ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ ಫೆ.12ರಂದು ನಡೆಯಿತು.
ಪುತ್ತೂರುನಿಂದ ಉಪ್ಪಿನಂಗಡಿ ರಸ್ತೆಯಲ್ಲಿ ಸುಮಾರು ಎಂಟು ಕಿಲೋಮೀಟರ್ ದೂರದಲ್ಲಿರುವ ಬೆಳ್ಳಿಪ್ಪಾಡಿಯಲ್ಲಿ ಇರುವ ಈ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ನಡೆಯುತ್ತಿದ್ದು ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಇದೀಗ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಮೋನಪ್ಪ ಗೌಡ ಪಮ್ಮನಮಜಲು, ಕೋಶಾಧಿಕಾರಿ ಚಂದ್ರ ಶೆಟ್ಟಿಗಾರ್ ಆಲಂಗೋಡಿ ಸಹಿತ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here