ಪುತ್ತೂರು: ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಫೆ.11ರಂದು ಪುತ್ತೂರಿನ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 918 ಪ್ರಕರಣಗಳ ಪೈಕಿ 466 ಪ್ರಕರಣಗಳನ್ನು ರಾಜಿಯಲ್ಲಿ ಇತ್ಯರ್ಥಗೊಳಿಸಿ ಫಲಾನುಭವಿಗಳಿಗೆ 4,30,94,576 ರೂ. ಪರಿಹಾರ ಮೊತ್ತವನ್ನು ವಿತರಿಸಲು ಆದೇಶಿಸಲಾಗಿದೆ.
ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ, ಚೆಕ್ ಬೌನ್ಸ್, ವಿಮಾ ಹಣದ ಪ್ರಕರಣ, ಬ್ಯಾಂಕ್ ಹಾಗೂ ಇತರ ಕಂಪನಿಗಳೊಂದಿಗೆ ಇರುವ ವ್ಯಾಜ್ಯಗಳಲ್ಲಿ ಕಕ್ಷಿದಾರರು ಒಪ್ಪುವ ರೀತಿಯಲ್ಲಿ ಇತ್ಯರ್ಥ ಮಾಡುವ ಪ್ರಯತ್ನ ನಡೆಯಿತು. ಪುತ್ತೂರಿನಲ್ಲಿರುವ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸರಿತಾ ಡಿ ಅವರ ನ್ಯಾಯಾಲಯದಲ್ಲಿ 30 ಪ್ರಕರಣಗಳಲ್ಲಿ 18 ಪ್ರಕರಣ ಇತ್ಯರ್ಥಗೊಂಡಿದೆ. ರೂ.48.25 ಲಕ್ಷ ವಿತರಣೆಗೆ ಆದೇಶ ಆಗಿದೆ. ಪುತ್ತೂರು ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಗೌಡ ಆರ್.ಪಿ ಅವರ ನ್ಯಾಯಾಲಯದಲ್ಲಿ 135 ಪ್ರಕರಣಗಳಲ್ಲಿ 71 ಇತ್ಯರ್ಥಗೊಂಡಿದೆ. ರೂ.1,27,24,950 ವಿತರಣೆಗೆ ಆದೇಶ ಆಗಿದೆ. ಹಿರಿಯ ಸಿವಿಲ್ ನ್ಯಾಯಾಲಯದ ಪ್ರಿಯಾ ಜೋವಲೆಕರ್ ಅವರ ನ್ಯಾಯಾಲಯದಲ್ಲಿ 133 ಪ್ರಕರಣಗಳಲ್ಲಿ 115 ಪ್ರಕರಣ ಇತ್ಯರ್ಥಗೊಂಡಿದ್ದು, ರೂ. 1,17,34,850 ವಿತರಣೆಗೆ ಆದೇಶ ಆಗಿದೆ. ಪ್ರಧಾನ ಸಿವಿಲ್ ನ್ಯಾಯಾಲಯ, ಜೆಎಮ್‌ಎಫ್‌ಸಿ ಅರ್ಚನಾ ಅವರ ನ್ಯಾಯಾಲಯದಲ್ಲಿ 331 ಪ್ರಕರಣಗಳಲ್ಲಿ 71 ಪ್ರಕರಣಗಳು ಇತ್ಯರ್ಥಗೊಂಡಿದ್ದು ರೂ.82,80,291 ವಿತರಣೆಗೆ ಆದೇಶ ಆಗಿದೆ. ಅಪರ ಸಿವಿಲ್ ನ್ಯಾಯಾಧೀಶ ಮತ್ತು ಜೆಎಮ್‌ಎಫ್‌ಸಿ ಶಿವಣ್ಣ ಹೆಚ್.ಆರ್ ಅವರ ನ್ಯಾಯಾಲಯದಲ್ಲಿ 158 ಪ್ರಕರಣಗಳಲ್ಲಿ 105 ಇತ್ಯರ್ಥಗೊಂಡಿದ್ದು, ರೂ.8,81,547 ವಿತರಣೆಗೆ ಆದೇಶ ಆಗಿದೆ. 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆಎಮ್‌ಎಫ್‌ಸಿ ಯೋಗೀಂದ್ರ ಶೆಟ್ಟಿ ಅವರ ನ್ಯಾಯಾಲಯದಲ್ಲಿ 131 ಪ್ರಕರಣಗಳಲ್ಲಿ 86 ಪ್ರಕರಣ ಇತ್ಯರ್ಥಗೊಂಡಿದ್ದು, ರೂ.1,47,938 ವಿತರಣೆಗೆ ಆದೇಶ ಆಗಿದೆ. ಪುತ್ತೂರಿನ 6 ನ್ಯಾಯಾಲಯಗಳಲ್ಲಿ ಒಟ್ಟು 466 ಪ್ರಕರಣಗಳು ಇತ್ಯರ್ಥಗೊಂಡಿದ್ದು, ರೂ. 4,30,94,576 ಮೊತ್ತವನ್ನು ಫಲಾನುಭವಿಗಳಿಗೆ ಪರಿಹಾರವಾಗಿ ವಿತರಿಸಲು ಆದೇಶಿಸಲಾಗಿದೆ. ಪ್ರಕರಣಗಳ ಇತ್ಯರ್ಥಕ್ಕೆ ಸಂಧಾನಕಾರರಾಗಿ ನ್ಯಾಯವಾದಿಗಳಾದ ಶ್ಯಾಮಪ್ರಸಾದ್, ವಿವೇಕ್ ಕೆ.ಎಸ್, ಅಕ್ಷತಾ, ಭಾರತಿ, ಸುಧಾಕರ್, ಹರೀಶ್ ಕುಮಾರ್ ಅವರು ಸಹಕರಿಸಿದರು. ಸದ್ರಿ ವ್ಯಾಜ್ಯಗಳಲ್ಲಿ ಸಂಧಾನಕಾರ ವಕೀಲರನ್ನು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ.ಅವರು ನೇಮಕ ಮಾಡಿದ್ದರು.
ವಿವಿಧ ನ್ಯಾಯಾಲಯಗಳಲ್ಲಿ ಇತ್ಯರ್ಥವಾದ ಪ್ರಕರಣಗಳು
- ಜಿಲ್ಲಾ ನ್ಯಾಯಾಲಯ-18
- ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯ-71
- ಹೆಚ್ಚುವರಿ ಸಿವಿಲ್ ನ್ಯಾಯಾಲಯ-115
- ಪ್ರಧಾನ ಸಿವಿಲ್, ಜೆಎಂಎ-ಸಿ ನ್ಯಾಯಾಲಯ-71
- ಅಪರ ಸಿವಿಲ್, ಜೆಎಂಎ-ಸಿ ನ್ಯಾಯಾಲಯ-105
- ೨ನೇ ಹೆಚ್ಚುವರಿ ಸಿವಿಲ್, ಜೆಎಂಎ-ಸಿ ನ್ಯಾಯಾಲಯ-86