ದ.ಕ.ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಸೂಕ್ಷ್ಮಪ್ರದೇಶದಲ್ಲಿ ಬ್ರೀಫಿಂಗ್ ಸಭೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಸ್ಥಳಗಳಲ್ಲಿ, ಪೊಲೀಸ್ ಸಿಬ್ಬಂದಿಗಳ ಸಾಮಾನ್ಯ ಬ್ರೀಫಿಂಗ್ ಸಭೆ ನಡೆಸುವ ಹೊಸ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಫೆ.12ರಂದು ದ.ಕ.ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಸ್ಥಳಗಳಲ್ಲಿ ಸಂಬಂಧಪಟ್ಟ ಡಿವೈಎಸ್ಪಿ, ಪಿಐ/ಸಿಪಿಐ, ಪಿಎಸ್‌ಐರವರುಗಳು ಸಿಬ್ಬಂದಿಗಳ ಬ್ರೀಫಿಂಗ್ ಸಭೆ ನಡೆಸಿದರು. ಜಿಲ್ಲೆಯ ಪೊಲೀಸ್ ವ್ಯವಸ್ಥೆ ಇನ್ನು ಹೆಚ್ಚು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುವ ದೃಷ್ಟಿಯಿಂದ ಹಾಗೂ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ದೃಷ್ಟಿಯಿಂದ ಇಂತಹ ಸಭೆಗಳನ್ನು ಕಡ್ಡಾಯವಾಗಿ ಪ್ರತಿ ಭಾನುವಾರ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಸ್ಥಳಗಳಲ್ಲಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here