ಕೌಕ್ರಾಡಿ ಒಕ್ಕೂಟದ ತ್ರೈಮಾಸಿಕ ಸಭೆ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ನೆಲ್ಯಾಡಿ ವಲಯದ ಕೌಕ್ರಾಡಿ ಒಕ್ಕೂಟದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡರವರ ಅಧ್ಯಕ್ಷತೆಯಲ್ಲಿ ಹೊಸಮಜಲು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಜಲಸಂರಕ್ಷಣೆ ವಿಧವಾದ ಮಳೆಕೊಯ್ಲು ಅಳವಡಿಕೆಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪಡೆದ ಡೇವಿಡ್ ಜೈಮಿ ಕೊಕ್ಕಡರವರು ಜಲಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ, ಒಕ್ಕೂಟದ ಸೇವಾಪ್ರತಿನಿಧಿ ನಮಿತಾ ಶೆಟ್ಟಿ, ಕಟ್ಟೆಮಜಲು ಒಕ್ಕೂಟದ ಸೇವಾಪ್ರತಿನಿಧಿ ಸುಮನ ಎಸ್, ಪದಾಧಿಕಾರಿಗಳು, ಉಪಸಮಿತಿ, ದಾಖಲಾತಿ ಸಮಿತಿ ಸದಸ್ಯರು, ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಜವಾಬ್ದಾರಿ ವಹಿಸಿದ ಸುಪ್ರಭಾ ತಂಡದ ಸದಸ್ಯ ರಾಜೇಶ್‌ರವರು ತಂಡದ ವರದಿ ವಾಚಿಸಿದರು. ಪ್ರದೀಪ್ ಕುಮಾರ್ ಸ್ವಾಗತಿಸಿ, ಹರೀಶ್ ವಂದಿಸಿದರು.

LEAVE A REPLY

Please enter your comment!
Please enter your name here