ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ :ರಾಮಕುಂಜದ ಜಿತೇಶ್‌ಗೆ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಛೇರಿ, ಮಧುಗಿರಿ ಶೈಕ್ಷಣಿಕ ಜಿಲ್ಲೆ, ತುಮಕೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕೊರಟಗೆರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಜಿತೇಶ್ ಎಸ್.ರವರು 14ರ ವಯೋಮಾನದ ಬಾಲಕರ ಉದ್ದ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.


ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ, ಮುಖ್ಯಗುರು ಗಾಯತ್ರಿ ಯು.ಎನ್, ವ್ಯವಸ್ಥಾಪಕ ರಮೇಶ್ ರೈ ಆರ್. ಬಿ. ಹಾಗೂ ಸಹಶಿಕ್ಷಕರ ಪ್ರೋತ್ಸಾಹದೊಂದಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮ ಬಿ ಹಾಗೂ ರಾಘವರವರು ತರಬೇತಿ ನೀಡಿದ್ದಾರೆ. ಇವರು ಗೋಳಿತ್ತೊಟ್ಟು ಸಮರಗುಂಡಿ ನಿವಾಸಿ ನಾಗೇಶ್ ಶೆಟ್ಟಿ ಹಾಗೂ ರತಿ ಶೆಟ್ಟಿ ದಂಪತಿಯ ಪುತ್ರ.

LEAVE A REPLY

Please enter your comment!
Please enter your name here