ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಡ್ಡಸ ಆಚರಣೆ ಮಾಡಲಾಯಿತು.
ಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ಜತೆ ಕಾರ್ಯದರ್ಶಿ ದಿವ್ಯಾ ಪಿ.ಅವರು ಭೂಮಿತಾಯಿಗೆ ಎಣ್ಣೆ ಬಿಟ್ಟು ಭೂಮಿ ಪೂಜೆ ಮಾಡುವುದರ ಮೂಲಕ ಸಾಂಪ್ರದಾಯಿಕವಾಗಿ ಆಚರಿಸಲಾಯಿತು.
ಶಾಲಾ ವಿದ್ಯಾರ್ಥಿಗಳಿಂದಲೇ ಆರಂಭಗೊಂಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಯವರು ವಹಿಸಿ, ಹಿರಿಯರು ಆಚರಿಸಿಕೊಂಡು ಬಂದಿರುವ ತುಳು ಆಚಾರ ವಿಚಾರ ಪದ್ಧತಿಗಳನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದೆಂದು ತಿಳಿಸಿದರು.
ತುಳು ಶಿಕ್ಷಕಿ ಸರಿತಾ ಜನಾರ್ದನ ಮತ್ತು ವಿದ್ಯಾರ್ಥಿ ಪ್ರಣಾಮ್ ಸಂದರ್ಭೋಚಿತವಾಗಿ ಮಾತನಾಡಿದರು. ತುಳು ವಿದ್ಯಾರ್ಥಿನಿ ಪ್ರಜ್ಞಾ ಕೆಡ್ಡಸ ಆಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಬಿ.ಎಲ್ ಜನಾರ್ದನ, ಸಂಸ್ಥೆಯ ಆಡಳಿತಾಧಿಕಾರಿ ಆನಂದ ಯಸ್.ಟಿ, ಮುಖ್ಯಗುರು ಗಾಯತ್ರಿ ಯು.ಎನ್, ತಾಂತ್ರಿಕ ಸಲಹೆಗಾರ ಜಯೇಂದ್ರ ಬಿ, ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರು ಕೆಡ್ಡಸ ಕುರಿತ ಗೀತೆಯನ್ನು ಹಾಡಿದರು. ತುಳು ವಿದ್ಯಾರ್ಥಿನಿ ಶ್ರೇಯಾ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಅಮೃತ್ ವಂದಿಸಿ, ಹರ್ಷಿತಾ ಮತ್ತು ಪ್ರಣವ್ ಕಾರ್ಯಕ್ರಮ ನಿರೂಪಿಸಿದರು. ಕೆಡ್ಡಸದ ವಿಶೇಷ ತಿಂಡಿ ನನ್ನೇರಿ ಮತ್ತು ಮಧ್ಯಾಹ್ನ ನುಗ್ಗೆ ಬದನೆಯ ವಿಶೇಷ ಭೋಜನ ನೀಡಲಾಯಿತು.