ಕಳುವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಪೋನ್‌ಗಳನ್ನು ಬ್ಲಾಕ್ ಮಾಡುವ ವ್ಯವಸ್ಥೆ ಜಾರಿ
ದ.ಕ.ಪೊಲೀಸ್ ಅಧೀಕ್ಷಕರಿಂದ ಆದೇಶ

0

ಪುತ್ತೂರು: ಕಳುವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್‌ಗಳನ್ನು ಬ್ಲಾಕ್ ಮಾಡುವ ಹೊಸ ವಿಧಾನವನ್ನು ದ.ಕ.ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕಳುವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಪೋನ್‌ಗಳು ಸೈಬರ್ ಅಪರಾಧ ನಾರ್ಕೊಟಿಕ್ಸ್ ಅಪರಾಧ ಸೇರಿದಂತೆ ಇತರೆ ಗಂಭೀರ ಅಪರಾಧಗಳಲ್ಲಿ ಬಳಕೆಯಾಗುತ್ತಿರುವುದು ಗಣನೀಯವಾಗಿ ಕಂಡುಬಂದಿರುತ್ತದೆ. ಇಂತಹ ಮೊಬೈಲ್ ಪೋನ್‌ಗಳ ದುರ್ಬಳಕೆಯನ್ನ ತಡೆಗಟ್ಟಲು ಕೇಂದ್ರ ಟೆಲಿಕಮ್ಯುನಿಕೇಶನ್ ಇಲಾಖೆಯಿಂದ ಕಳುವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಪೋನ್‌ಗಳನ್ನು ಬ್ಲಾಕ್ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿರುತ್ತದೆ ಹಾಗೂ ಪೊಲೀಸ್ ಇಲಾಖೆಯಿಂದ ಕೂಡಾ ಈ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದೆ.

ಈ ಕೆಳಕಂಡ ವಿಧಾನಗಳನ್ನು ಅನುಸರಿಸುವುದರ ಮೂಲಕ ಕಳುವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಪೋನ್‌ಗಳನ್ನು ಬ್ಲಾಕ್ ಮಾಡಬಹುದಾಗಿದೆ.
ನಿಮ್ಮ ಮೊಬೈಲ್ ಪೋನ್ ಕಳುವು ಕಾಣೆಯಾದರೆ/ಸುಲಿಗೆಯಾದರೆ ತಾವು ತಕ್ಷಣವೇ KSP E-Lost ಅಪ್ಲಿಕೇಶನ್‌ನಲ್ಲಿ ದೂರನ್ನು ಸಲ್ಲಿಸಿ Digital E Acknowledgement ಪಡೆದುಕೊಳ್ಳಬೇಕು. ಅಥವಾ ಹತ್ತಿರದ ಪೊಲೀಸ್ ಠಾಣೆಗೆ ತೆರಳಿ ದೂರನ್ನು ಸಲ್ಲಿಸಿ ಸ್ವೀಕೃತಿಯನ್ನು ಪಡೆದುಕೊಳ್ಳುವುದು. ಸ್ವೀಕೃತಿಯ ಪ್ರತಿಯನ್ನು ತಮ್ಮ ಬಳಿ ಇಟ್ಟುಕೊಂಡಿರಬೇಕು.

ನೀವು ಕಳೆದುಕೊಂಡಿರುವ ಸಿಮ್‌ಕಾರ್ಡ್‌ನ್ನು ಸಂಬಂಧಪಟ್ಟ ಸರ್ವಿಸ್ ಪ್ರೊವೈಡರ್‌ನಿಂದ ಮತ್ತೆ ಪಡೆದುಕೊಂಡು ಒ.ಟಿ.ಪಿ ಪಡೆಯಲು ಸದರಿ ಸಿಮ್ ಕಾರ್ಡನ್ನು ಚಾಲನೆಯಲ್ಲಿ ಇಟ್ಟುಕೊಳ್ಳುವುದು. CEIR PORTALನಲ್ಲಿ ಒ.ಟಿ.ಪಿ ಪಡೆಯಲು ಇದು ಅನುಕೂಲವಾಗುತ್ತದೆ.
www.ceir.gov.in ವೆಬ್‌ಸೈಟ್‌ಗೆ ಹೋಗಿ ತಮ್ಮ ಕಳುವಾದ/ಕಾಣೆಯಾದ/ಸುಲಿಗೆಯಾದ Mobile Phone ಗಳ ಮಾಹಿತಿಯನ್ನು ನಮೂದಿಸಬೇಕು. ಸದರಿ ಮಾಹಿತಿ ನಮೂದಿಸಿದ 24 ಗಂಟೆಗಳಲ್ಲಿ ತಮ್ಮ Mobile Phone ಬ್ಲಾಕ್ ಆಗುತ್ತದೆ. ನಂತರ ಯಾರೂ ಕೂಡಾ ಆ Mobile ಅನ್ನು ದುರ್ಬಳಕೆ ಮಾಡಲು ಸಾದ್ಯವಿರುವುದಿಲ್ಲ.
ಕಳುವಾದ/ಕಾಣೆಯಾದ/ಸುಲಿಗೆಯಾದ Mobile Phone ಪತ್ತೆಯಾದರೆ ಈಗಾಗಲೇ ತಿಳಿಸಿರುವ CEIR PORTAL ನಲ್ಲಿ ಲಾಗಿನ್ ಆಗಿ Unblock ಮಾಡಿ ಉಪಯೋಗಿಸಬಹುದು.

ಸಾರ್ವಜನಿಕರು ಪೊಲೀಸ್ ಠಾಣೆಯನ್ನು ಸಂಪರ್ಕಿಸಿದರೆ CEIR PORTAL ಮೂಲಕ ಕಳುವಾದ/ಕಾಣೆಯಾದ Mobile Phone ಅನ್ನು Block ಮಾಡಲಾಗುವುದು ಹಾಗೂ ಸದರಿ Mobile Phone ಪತ್ತೆಯಾದಲ್ಲಿ Unblock ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here