ಪುತ್ತೂರು: ದೇಶದ ಬಂಜಾರ ಸಮುದಾಯದ ಏಕೈಕ ಸಂತ ಸೇವಾಲಾಲ್ ಅವರ ಜಯಂತ್ಯುತ್ಸವವು ಫೆ. 14ರಂದು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿನ ತಹಶೀಲ್ದಾರ್ ಸಭಾಂಗಣದಲ್ಲಿ ನಡೆಯಿತು.
ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಅವರು ದೀಪ ಪ್ರಜ್ವಲ್ವಿಸಿ ಸಂತ ಸೇವಾಲಾಲ್ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಗ್ರೇಡ್ 2 ತಹಸೀಲ್ದಾರ್ ಲೋಕೇಶ್ ಉಪಸ್ಥಿತರಿದ್ದರು. ಉಪತಹಶೀಲ್ದಾರ್ ಸುಲೋಚನಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸಂತ ಸೇವಾಲಾಲ್ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ ಎಂದು ಮಾಹಿತಿ ನೀಡಿದರು. ದಯಾನಂದ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.