ಬಸ್‌ನಲ್ಲಿ ಮಹಿಳೆಗೆ ಕಿರುಕುಳ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0

ಪುತ್ತೂರು: ವರ್ಷದ ಹಿಂದೆ ಬಸ್‌ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಈಶ್ವರಮಂಗಲ ದೇಂತಾಡಿ ನಿವಾಸಿ ಮೊಹಮ್ಮದ್ ಸತ್ತಾರ್ ಬಂಧಿತ ಆರೋಪಿ. 2022 ರಲ್ಲಿ ಬಸ್ ನಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಮಹಮ್ಮದ್ ಸತ್ತಾರ್ ಪೊಲೀಸರಿಂದ ಬಂಧಿತರಾಗಿದ್ದರು. ನ್ಯಾಯಾಲಯದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಆರೋಪಿಯು ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ನ್ಯಾಯಾಲಯ ಆರೋಪಿ ವಿರುದ್ದ ವಾರಂಟ್ ಜಾರಿ ಮಾಡಿತ್ತು. ನಗರ ಪೊಲೀಸ್ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ಶರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

LEAVE A REPLY

Please enter your comment!
Please enter your name here