ಫೆ.16 : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾತ್ರೋತ್ಸವಕ್ಕೆ  ಗೊನೆಮುಹೂರ್ತ 

0

ಸವಣೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಹಾಗೂ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಹಾಗೂ ಸತ್ಯನಾರಾಯಣ ಪೂಜೆ, ಪರಿವಾರ ದೈವಗಳ ನೇಮೋತ್ಸವ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.23 ಮತ್ತು ಫೆ 24 ರಂದು ನಡೆಯಲಿದೆ. ಇದರ ಪೂರ್ವಭಾವಿಯಾಗಿ ಫೆ.16ರಂದು ಗೊನೆ ಮುಹೂರ್ತ ನಡೆಯಲಿದೆ.

ದೇವಳದ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.23, 24ರಂದು ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಹಸಿರುವಾಣಿ ಸಮರ್ಪಣೆ ಫೆ.21ರಂದು ನಡೆಯಲಿದೆ.

ಫೆ.23ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಬಳಿಕ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ದೈವಗಳ ಭಂಡಾರ ತೆಗೆದ ಬಳಿಕ ವಲ್ಮೀಕ ರೂಪಿ ಸುಬ್ರಹ್ಮಣ್ಯ ದೇವರಿಗೆ ರಂಗಪೂಜೆ ನಡೆಯಲಿದೆ. ಸಂಜೆ 7ರಿಂದ ನೃತ್ಯನಿನಾದ ಕಡಬ ತಂಡದಿಂದ ನೃತ್ಯ-ವೈಭವ ನಡೆಯಲಿದೆ.

ಫೆ.23ರಂದು ಪ್ರಾತಃಕಾಲ ವ್ಯಾಘ್ರ ಚಾಮುಂಡಿಯ ನೇಮೋತ್ಸವ, ಬೆಳಿಗ್ಗೆ ರುದ್ರ ಚಾಮುಂಡಿಯ ನೇಮೋತ್ಸವ ಗುಳಿಗ ದೈವಕ್ಕೆ ತಂಬಿಲ ಸೇವೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್‌ ಕುಮಾರ್‌ ರೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here