6ನೇ ಕರ್ನಾಟಕ ಗಡಿನಾಡ ಸಮ್ಮೇಳನದ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಗಡಿನಾಡ ಧ್ವನಿ ಮಾಸ ಪತ್ರಿಕೆ ಮತ್ತು ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಒಡ್ಯ ಇವರ ಸಹಕಾರದೊಂದಿಗೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಪ್ರಾಧಿಕಾರ ಇವುಗಳ ಸಹಯೋಗದಲ್ಲಿ ಫೆಬ್ರವರಿ 25ರಂದು ಒಡ್ಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ 6ನೇ ಕರ್ನಾಟಕ ಗಡಿನಾಡ ಸಮ್ಮೇಳನದ ಆಮಂತ್ರಣ ಪತ್ರವನ್ನು ಒಡ್ಯ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಡುಗಡೆಗೊಳಿಸಲಾಯಿತು.

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಸ್ವಾಗತ ಸಮಿತಿ ಸಂಚಾಲಕ ಕೃಷ್ಣ ಭಟ್ ಬಟ್ಯಮೂಲೆ, ಎಸ್‌.ಡಿ.ಎಂ.ಸಿ. ಅಧ್ಯಕ್ಷ ದೇವಪ್ಪ ನಾಯ್ಕ್ ಕೊಂದಲ್ಕಾನ, ಟ್ರಸ್ಟಿನ ಕಾರ್ಯದರ್ಶಿ ಈಶ್ವರ ಭಟ್ ಕಡಂದೇಲು, ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಡಾ. ಹಾಜಿ ಅಬೂಬಕ್ಕರ್ ಆರ್ಲಪದವು, ಶಾಲಾ ಮುಖ್ಯ ಗುರು ಜನಾರ್ದನ ಅಲ್ಚಾರು, ಶಿಕ್ಷಕ ಉಸ್ಮಾನ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here