ಫೆ.20: ಸಂತ ಕವಿ ಸರ್ವಜ್ಞ, ಛತ್ರಪತಿ ಶಿವಾಜಿ ಜಯಂತಿ ದಿನಾಚರಣೆ

0

ಪುತ್ತೂರು; ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಪುತ್ತೂರು ತಾಲೂಕು ಕುಲಾಲ ಸಮಾಜ ಸೇವಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸಂತಕವಿ ಸರ್ವಜ್ಞ ಜಯಂತಿ ಮತ್ತು ಛತ್ರಪತಿ ಶಿವಾಜಿ ಜಯಂತಿ ದಿನಾಚರಣೆ ಫೆ.20ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಎಂ. ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here