ಗ್ರಾಮ ಪಂಚಾಯತ್‌ಗಳಲ್ಲಿ ಪ್ರಾಥಮಿಕ ಕೃಷಿ ಸಾಲ ಸೊಸೈಟಿ ಸ್ಥಾಪನೆಗೆ ಕೇಂದ್ರ ಸಂಪುಟ ಅನುಮೋದನೆ

0

ಪುತ್ತೂರು: ಎರಡು ಲಕ್ಷ ಗ್ರಾಮ ಪಂಚಾಯತ್‌ಗಳಲ್ಲಿ ಹೊಸ ಪ್ರಾಥಮಿಕ ಕೃಷಿ ಸಾಲ ಸೊಸೈಟಿ ಸ್ಥಾಪಿಸಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ದೇಶದಲ್ಲಿ ಸಹಕಾರ ಚಳುವಳಿಯನ್ನು ಸಬಲಗೊಳಿಸಲು ಹಾಗೂ ಅದರ ವ್ಯಾಪ್ತಿಯನ್ನು ತಳಮಟ್ಟದವರೆಗೆ ವಿಸ್ತರಿಸಲು ಕೇಂದ್ರ ಸಂಪುಟ ಈ ಅನುಮತಿ ನೀಡಿದೆ.

ಹೊಸದಿಲ್ಲಿಯಲ್ಲಿ ಬುಧವಾರ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಮಾಹಿತಿ ಹಾಗೂ ಪ್ರಸಾರ ಖಾತೆಯ ಸಚಿವ ಅನುರಾಗ್ ಠಾಕೂರ್, ಆರಂಭದಲ್ಲಿ 2 ಲಕ್ಷ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಾಲ ಸೊಸೈಟಿ, ಕಾರ್ಯಸಾಧ್ಯವಾದ ಡೈರಿ ಸಹಕಾರಿ ಸೊಸೈಟಿ ಹಾಗೂ ಮೀನುಗಾರಿಕೆ ಸಹಕಾರಿ ಸೊಸೈಟಿಗಳನ್ನು ಈ ಸೌಲಭ್ಯ ಇಲ್ಲದ ಪಂಚಾಯತ್‌ಗಳಲ್ಲಿ ಸ್ಥಾಪಿಸಲಾಗುವುದು. ಈ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಾಲ ಸೊಸೈಟಿ (ಪಿಎಸಿಎಸ್), ಡೈರಿ ಸಹಕಾರಿ ಸೊಸೈಟಿ ಹಾಗೂ ಮೀನುಗಾರಿಕೆ ಸಹಕಾರಿ ಸೊಸೈಟಿಯನ್ನು ಮುಂದಿನ ಐದು ವರ್ಷಗಳಲ್ಲಿ ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು.

ಇದರಿಂದ ಮೂಲ ಸೌಕರ್ಯಗಳನ್ನು ಸ್ಥಾಪಿಸಲು ಹಾಗೂ ಆಧುನೀಕರಿಸಲು ಸಹಕಾರಿ ಸೊಸೈಟಿಗಳಿಗೆ ಸಾಧ್ಯವಾಗಲಿದೆ. ಇದು ಸಹಕಾರಿ ಕ್ಷೇತ್ರವನ್ನು ಸಬಲಗೊಳಿಸಲಿದೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ನೆರವಾಗಲಿದೆ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here