ಚೆಕ್ ಅಮಾನ್ಯ ಪ್ರಕರಣ: ಆರೋಪಿಯ ಬಂಧನ

0

ಪುತ್ತೂರು:ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕೃಷ್ಣನಗರ ನಿವಾಸಿ ಖಲಂದರ್ ನವಾಜ್ ಬಂಧಿತ ಆರೋಪಿ. ಅವರು 2022ರಲ್ಲಿ ಪುತ್ತೂರಿನ ಸೈಂಟ್ ಮಿಲಾಗ್ರಿಸ್ ಕೋ ಓಪರೇಟಿವ್ ಬ್ಯಾಂಕ್‌ಗೆ ಸಾಲದ ವ್ಯವಹಾರಕ್ಕೆ ಸಂಬಂಧಿಸಿ ಚೆಕ್ ನೀಡಿದ್ದರು. ಚೆಕ್ ಅಮಾನ್ಯವಾದ ಹಿನ್ನೆಲೆಯಲ್ಲಿ ಬ್ಯಾಂಕಿನವರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.

ಆರೋಪಿ ಖಲಂದರ್ ನವಾಜ್ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯ ಆರೋಪಿಗೆ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

LEAVE A REPLY

Please enter your comment!
Please enter your name here