ಮಂಗಳೂರು: ಸಂಕಷ್ಟದಲ್ಲಿರುವ ರಬ್ಬರ್ ಬೆಳೆಗಾರರನ್ನು ರಕ್ಷಣೆ ಮಾಡಲು ರಬ್ಬರಿಗೆ ಬೆಂಬಲ ಬೆಲೆಯನ್ನು ಬಜೆಟ್‌ನಲ್ಲಿ ಘೋಷಿಸುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಲಾಗಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.
ಅಡಿಕೆ ತೋಟವನ್ನು ಬಾಧಿಸುತ್ತಿರುವ ಹಳದಿ ಎಲೆ ಮತ್ತು ಎಲೆ ಚುಕ್ಕಿ ರೋಗಕ್ಕೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಖಾಸಗಿ ವಿಜ್ಞಾನಿಗಳ ಸಹಭಾಗಿತ್ವದಲ್ಲಿ ಸಂಶೋಧನೆ ಮಾಡಲು ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ(ARDF)ಕ್ಕೆ 10 ಕೋಟಿ ರೂಪಾಯಿ ಅನುದಾನವನ್ನು ಈ ಸಲದ ಬಜೆಟ್‌ನಲ್ಲಿ ಬಿಡುಗಡೆ ಮಾಡುವಂತೆಯೂ ಕ್ಯಾಂಪ್ಕೊ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದೆ.
ಮುಖ್ಯಮಂತ್ರಿಯವರಿಂದ ಸಕರಾತ್ಮಕ ಸ್ಪಂದನೆ ಸಿಕ್ಕಿದ್ದು ರಬ್ಬರಿಗೆ ಬೆಂಬಲ ಬೆಲೆ ಮತ್ತು ಸಂಶೋಧನಾ ಕೇಂದ್ರ(ARDF)ಕ್ಕೆ ಅನುದಾನ ಬಿಡುಗಡೆಯಾಗುವ ಬಗ್ಗೆ ಕ್ಯಾಂಪ್ಕೊ ಆಡಳಿತ ಮಂಡಳಿ ನಿರೀಕ್ಷೆಯಲ್ಲಿದೆ ಎಂದು ಕೊಡ್ಗಿ ತಿಳಿಸಿದ್ದಾರೆ.