ಫೆ.20: ಗೋಳಿತ್ತೊಟ್ಟು ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ಸತ್ಯನಾರಾಯಣ ಪೂಜೆ, ವಾರ್ಷಿಕೋತ್ಸವ

0

ನೆಲ್ಯಾಡಿ: ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿ ವಿನಾಯಕಬೆಟ್ಟ ಗೋಳಿತ್ತೊಟ್ಟು ಇದರ ಆಶ್ರಯದಲ್ಲಿ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ವಾರ್ಷಿಕೋತ್ಸವ ಫೆ.20ರಂದು ಗೋಳಿತ್ತೊಟ್ಟು ವಿನಾಯಕಬೆಟ್ಟ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ನಡೆಯಲಿದೆ ಎಂದು ಸಮಿತಿ ಪ್ರಕಟಣೆ ತಿಳಿಸಿದೆ.

ಬೆಳಿಗ್ಗೆ 8 ಗಂಟೆಗೆ ಗಣಹೋಮ, 9ರಿಂದ ಶ್ರೀ ಸತ್ಯನಾರಾಯಣ ಪೂಜೆ ಪ್ರಾರಂಭ, ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 2ರಿಂದ ಹಿರೇಬಂಡಾಡಿ ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ, ಕುಂತೂರು ಗಡಿಯಾರ್ನಡ್ಕ ಶ್ರೀ ಮಹಮ್ಮಾಯಿ ಭಜನಾ ತಂಡದವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30ರಿಂದ ಶಿಶುಮಂದಿರ ಹಾಗೂ ಬಾಲಗೋಕುಲ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ರಾತ್ರಿ 7.30ರಿಂದ ಧಾರ್ಮಿಕ ಸಭೆ ನಡೆಯಲಿದ್ದು ಭಾರತೀಯ ಜನತಾಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಧರ್ಮದರ್ಶಿ ಮಾಧವ ಸರಳಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಸೌತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್, ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ, ಕೆಎನ್‌ಆರ್ ಕಂಪನಿ ಪ್ರಾಜೆಕ್ಟ್ ಇನ್‌ಚಾರ್ಜ್ ಅಶೋಕ್ ರೆಡ್ಡಿ, ಕೊಕ್ಕಡ ಉಪ ಅಂಚೆ ಪಾಲಕ ಲೋಕೇಶ್ ಪಿ.ದೇವಾಡಿಗ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ರಾತ್ರಿ 9.15ಕ್ಕೆ ಮಹಾಮಂಗಳಾರತಿ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 10.15ರಿಂದ ಶ್ರೀ ಲಲಿತೆ ಕಲಾವಿದೆರ್ ಮಂಗಳೂರು ಇವರಿಂದ ತುಳು ನಾಟಕ ’ಗರುಡ ಪಂಚಮಿ’ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here