ಪುತ್ತೂರಿನಲ್ಲಿ ಗೃಹರಕ್ಷಕರ ಚುನಾವಣಾ ಪೂರ್ವ ಸಿದ್ಧತಾ ಸಭೆ-ಚುನಾವಣಾ ಕರ್ತವ್ಯಕ್ಕೆ ಸಿದ್ಧರಾಗಲು ಡಾ. ಮುರಲೀ ಮೋಹನ್ ಚೂಂತಾರ್ ಸೂಚನೆ

0

ಪುತ್ತೂರು: ಮುಂದಿನ ಮೇ ತಿಂಗಳಿನಲ್ಲಿ ನಡೆಯುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಕರ್ತವ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಗೃಹರಕ್ಷಕರನ್ನು ನೇಮಿಸಬೇಕಾಗಿರುವುದರಿಂದ ದ.ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಮತ್ತು ಪೌರರಕ್ಷಣಾ ಪಡೆಯ ಮುಖ್ಯಪಾಲಕರಾದ ಡಾ. ಮುರಲೀ ಮೋಹನ್ ಚೂಂತಾರು ಅವರು ಪುತ್ತೂರಿನ ಗೃಹರಕ್ಷಕದಳ ಘಟಕದ ಕಛೇರಿಗೆ ಫೆ. 19ರಂದು ಭೇಟಿ ನೀಡಿದರು.


ನಿಷ್ಕ್ರಿಯ ಗೃಹರಕ್ಷಕರನ್ನು ತೆಗೆದುಹಾಕಿ ಹೆಚ್ಚು ಕ್ರಿಯಾಶೀಲ ಗೃಹರಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಘಟಕಾಧಿಕಾರಿ ಅಭಿಮನ್ಯು ರೈ ಅವರಿಗೆ ಸೂಚನೆ ನೀಡಿದ ಅವರು ಎಲ್ಲಾ ಗೃಹರಕ್ಷಕರು ತಮ್ಮ ಸದಸ್ಯತ್ವ ನವೀಕರಣಗೊಳಿಸಿ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಮಾಡಿಸಿಕೊಂಡು ಚುನಾವಣೆಗೆ ತಯಾರಾಗುವಂತೆ ಸೂಚನೆ ನೀಡಿದರು. ಪದೇ ಪದೇ ಕಾರಣವಿಲ್ಲದೆ ವಾರದ ಕವಾಯತಿಗೆ ಗೈರು ಹಾಜರಾಗುವ ಮತ್ತು ಬಂದೋಬಸ್ತ್ ಕರ್ತವ್ಯಗಳಿಗೆ ಬಾರದೇ ಇರುವ ಗೃಹರಕ್ಷಕರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಘಟಕಾಧಿಕಾರಿಗೆ ಸೂಚನೆ ನೀಡಿದ ಡಾ.ಮುರಲೀ ಮೋಹನ್ ಚೂಂತಾರ್ ಅವರು ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಗೆ ಎಲ್ಲಾ ಗೃಹರಕ್ಷಕರು ನೊಂದಾಯಿಸಿಕೊಳ್ಳುವಂತೆ ಸಲಹೆ ನೀಡಿದರು. ಹಿರಿಯ ಗೃಹರಕ್ಷಕರಾದ ಜಗನ್ನಾಥ್, ಸುದರ್ಶನ್ ಜೈನ್, ವಿಠಲ್ ನಾಯಕ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here