ಪುತ್ತೂರು: ಇತ್ತಿಚೆಗೆ ಪುತ್ತೂರಿನಲ್ಲಿ ಅಭೂತಪೂರ್ವವಾಗಿ ನಡೆದ ಆದಿ ಚುಂಚನಗಿರಿ ಭೈರವೈಕ್ಯ ಶ್ರೀ ಶ್ರೀ ಡಾ| ಬಾಲಗಂಗಾಧರನಾಥ ಸ್ವಾಮೀಜಿಯವರ 78 ನೇ ಜಯಂತ್ಯೋತ್ಸವ ಸಂಸ್ಮರಣಾ ಸಮಿತಿ ಅಭಿನಂದನಾ ಸಭೆಯು ಫೆ.19 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು.
ಆದಿ ಚುಂಚನಗಿರಿ ಮಂಗಳೂರು ಶಾಖಾಮಠದ ಶ್ರೀ ಧರ್ಮಪಾಲನಾಥ ಸ್ವಾಮಿಜಿಯವರ ನೇತೃತ್ವದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು ಅಭಿನಂದನಾ ಮಾತುಗಳನ್ನಾಡಿದರು. ಕಾರ್ಯಕ್ರಮದ ಜವಾಬ್ದಾರಿ ನಿರ್ವಹಿಸಿದ ವಿವಿಧ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರನ್ನು ಗೌರವಿಸಲಾಯಿತು. ಜಯಂತ್ಯೋತ್ಸವ ಪೂರ್ವ ತಯಾರಿ ಮತ್ತು ಜಯಂತ್ಯೋತ್ಸವ ಕಾರ್ಯಕ್ರಮವನ್ನು ಪ್ರೋಜೆಕ್ಡರ್ ಮೂಲಕ ಪ್ರದರ್ಶಿಸಿ ಸಿಂಹಾವಲೋಕನ ಮಾಡಲಾಯಿತು.
ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ಜಯಂತ್ಯೋತ್ಸವ ಸಂಸ್ಮರಣಾ ಸಮಿತಿ ಜಿಲ್ಲಾ ಆರ್ಥಿಕ ಸಮಿತಿ ಸಂಚಾಲಕರಾದ ಉಮೇಶ್, ಯು ಪಿ ರಾಮಕೃಷ್ಣ, ಸಂಸ್ಮರಣಾ ಸಮಿತಿ ಜಿಲ್ಲಾ ಸಂಚಾಲಕ ಚಿದಾನಂದ ಬೈಲಾಡಿ, ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷರು ಮತ್ತು ಸಂಸ್ಮರಣಾ ಸಮಿತಿ ಕಾರ್ಯದರ್ಶಿ ನಾಗೇಶ್ ಗೌಡ ಕೆಡೆಂಜಿ, ಮಹಿಳಾ ಗೌಡ ಸಂಘದ ಅಧ್ಯಕ್ಷೆ ಮೀನಾಕ್ಷಿ ಡಿ ಗೌಡ, ಮಹಿಳಾ ಸಂಘದ ಮಾಜಿ ಅಧ್ಯಕ್ಷೆ ಗೌರಿ ಬನ್ನೂರು ಸಹಿತ ಹಲವಾರು ಮಂದಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಮರಣಾ ಸಮಿತಿ ತಾಲೂಕು ಸಂಚಾಲಕ ದಿನೇಶ್ ಮೆದು ಸ್ವಾಗತಿಸಿದರು. ದಾಮೋದರ್ ನಂದಿಲ ಕಾರ್ಯಕ್ರಮ ನಿರೂಪಿಸಿದರು.