ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಛತ್ರಪತಿ ಶಿವಾಜಿ ಜಯಂತಿ, ಸಂತಕವಿ ಸರ್ವಜ್ಞ ಜಯಂತಿ ಆಚರಣೆ

0

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ‌ ಮತ್ತು ಕುಲಾಲ ಸಮಾಜ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಛತ್ರಪತಿ ಶಿವಾಜಿ ಜಯಂತಿ ಮತ್ತು ಸಂತಕವಿ ಸರ್ವಜ್ಞ ಜಯಂತಿ ಆಚರಣೆಯು ಫೆ.20ರಂದು ತಾಲೂಕು ಆಡಳಿತ ಸೌಧದಲ್ಲಿನ ತಹಸೀಲ್ದಾರ್ ಸಭಾಂಗಣದಲ್ಲಿ ನಡೆಯಿತು.

ಗ್ರೇಡ್ 2 ತಹಸೀಲ್ದಾರ್ ಲೋಕೇಶ್ ಛತ್ರಪತಿ ಶಿವಾಜಿ ಮತ್ತು ಸರ್ವಜ್ಞರ ಭಾವ ಚಿತ್ರದ ಎದುರು ದೀಪ ಪ್ರಜ್ವಲನೆ ಮತ್ತು ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನ್ಯಾಯವಾದಿ ಮಹೇಶ್ ಕೆ ಸವಣೂರು ಉಪನ್ಯಾಸ ನೀಡಿದರು. ಛತ್ರಪತಿ ಶಿವಾಜಿಯ ಆದರ್ಶ ಬದುಕನ್ನು ನಮ್ಮ‌ ಜೀವನದಲ್ಲಿ ಅಳವಡಿಸಬೇಕು, ನೈತಿಕ, ಸಾಮಾಜಿಕ, ಧಾರ್ಮಿಕವಾಗಿ ಸಮಾಜದ ಅಂಕುಡೊಂಕನ್ನು ತಿದ್ದುವ ಸರ್ವಜ್ಞರ ಬದುಕು ನಮಗೆ ಮಾರ್ಗದರ್ಶಕ ಎಂದರು‌.

ಕುಲಾಲ ಸಂಘದ ಅಧ್ಯಕ್ಷ ನವೀನ್ ಕುಲಾಲ್ ಅವರು ಮಾತನಾಡಿ ಹಿಂದುಸ್ಥಾನಕ್ಕೆ ಅದರ್ಶ ಪುರುಷ ಶಿವಾಜಿ ಆಡಳಿತಾತ್ಮಕ ವ್ಯವಸ್ಥೆಯನ್ನು ಸಮಾಜಕ್ಕೆ ತೋರಿಸಿ ಕೊಟ್ಟವರು. ಅದೇ ರೀತಿ ಸರ್ವಜ್ಞರ ವಚನ ನಮಗೆಲ್ಲ ಉತ್ತಮ ಮಾರ್ಗದರ್ಶನ ಎಂದರು‌. ಉಪತಹಸೀಲ್ದಾರ್ ಸುಲೋಚನಾ, ಕಂದಾಯ ನಿರೀಕ್ಷಕ ದಯಾನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕ ಹರಿಪ್ರಸಾದ್ ಸಹಿತ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ತಾಲೂಕು ಕಚೇರಿಯ ವೀಣಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here