ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್‌ನ ವಾರ್ಷಿಕ ದಿನಾಚರಣೆ

0

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವಾರ್ಷಿಕ ದಿನಾಚರಣೆ ಮತ್ತು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮ ರಿಕ್ರಿಯೇಷನ್ ಸೆಂಟರಿನ ಸಭಾಂಗಣದಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಕ್ಯಾಂಪ್ಕೋ ನಿಯಮಿತದ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಕುಮಾರ್ ಎಚ್. ಎಂ, ಕ್ಯಾಂಪ್ಕೋದ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ, ನಿರ್ದೇಶಕರುಗಳಾದ ಕೃಷ್ಣ ಪ್ರಸಾದ್ ಮಡ್ತಿಲ, ಮಹೇಶ್ ಚೌಟ, ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಎ ಜಿ ಎಮ್ ಶ್ಯಾಮ್ ಪ್ರಸಾದ್ ಎಚ್, ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಯೂನಿಯನ್ ಅಧ್ಯಕ್ಷ ತೀರ್ಥರಾಮ್ ಮತ್ತು ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷ ಪ್ರಶಾಂತ್ ಭಟ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಸುಲತಾ ಸತೀಶ್, ಶೋಭಾ ನಾಗೇಶ್, ವಾಣಿ ಪ್ರಶಾಂತ್ ಭಟ್, ಶಶಿಕಲಾ ಶೇಖರ ಪೂಜಾರಿ ಪ್ರಾರ್ಥನೆ ಹಾಡಿದರು.

ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷ ಪ್ರಶಾಂತ್ ಭಟ್ ಸ್ವಾಗತ ಭಾಷಣ ಮಾಡಿದರು. ರಿಕ್ರಿಯೇಷನ್ ಸೆಂಟರಿನ ಸದಸ್ಯರು ಅತಿಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.
ರಿಕ್ರಿಯೇಷನ್ ಸೆಂಟರಿನ ಉಪಾಧ್ಯಕ್ಷೆ ವಿನುತಾ ವರದಿ ವಾಚನ ಮಾಡಿದರು.

ಎಸ್. ಎಸ್. ಎಲ್. ಸಿ, ಪಿಯುಸಿ, ಡಿಗ್ರಿ, ಇಂಜಿನಿಯರಿಂಗ್, ಮೆಡಿಕಲ್ ಮತ್ತು ಇನ್ನಿತರ ಪರೀಕ್ಷೆಗಳಲ್ಲಿ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾದ ಹಾಗೂ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳಿಸಿರುವ ವಿದ್ಯಾರ್ಥಿಗಳನ್ನು ಮತ್ತು ಚಾಕಲೇಟು ಕಾರ್ಖಾನೆಯಲ್ಲಿ ನಿವೃತ್ತಿ ಹೊಂದಿದವರನ್ನು ಸನ್ಮಾನಿಸಲಾಯಿತು.

ವಾರ್ಷಿಕ ಕ್ರೀಡಾ ಕೂಟದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ನೀಡಲಾಯಿತು. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಖಾದರ್ ಮತ್ತು ಉಷಾ ಕಿರಣ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು. ರಿಕ್ರಿಯೇಷನ್ ಸೆಂಟರಿನ ಕಾರ್ಯದರ್ಶಿ ಸತೀಶ್ ಕುಮಾರ್ ಕೆ ಧನ್ಯವಾದ ಸಮರ್ಪಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಕ್ಯಾಂಪ್ಕೋ ಸುವರ್ಣ ಮಹೋತ್ಸವದ ಪ್ರಯುಕ್ತ ಭೋಜನ ವ್ಯವಸ್ಥೆ ಮಾಡಲಾಯಿತು.

LEAVE A REPLY

Please enter your comment!
Please enter your name here