ಫೆ. 25ಕ್ಕೆ ಒಡ್ಯದಲ್ಲಿ 6ನೇ ಕರ್ನಾಟಕ ಗಡಿನಾಡ ಸಮ್ಮೇಳನ

0

ಪುತ್ತೂರು: ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಗಡಿನಾಡು ಪ್ರದೇಶದಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಬಹಿರಂಗ ಅಧಿವೇಶನ ಮತ್ತು ಠರಾವು ಮಂಡನೆಯನ್ನು ಕರ್ನಾಟಕ ಮತ್ತು ಕೇರಳ ಸರಕಾರಕ್ಕೆ ಮಾಡುವ ಉತ್ತಮ ಉದ್ದೇಶವಿಟ್ಟುಕೊಂಡು ಗಡಿನಾಡಿನ ಶ್ರೇಯೋಭಿವೃದ್ಧಿಗಾಗಿ ಹಲವು ಕಾರ್ಯ ಮಾಡುವ ಮೂಲಕ ಈ ಬಾರಿ 6ನೇ ಕರ್ನಾಟಕ ಗಡಿನಾಡ ಸಮ್ಮೇಳನವು ಫೆ. 25ಕ್ಕೆ ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆ ಒಡ್ಯದಲ್ಲಿ ಪೂರ್ವಾಹ್ನ 7 ರಿಂದ ಸಂಜೆ 6ರತನಕ ವೈಶಿಷ್ಟ್ಯ ಪೂರ್ಣವಾಗಿ ಜರುಗಲಿದೆ ಎಂದು ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷ ಡಾ. ಹಾಜಿ ಯಸ್ ಅಬೂಬಕ್ಕರ್ ಆರ್ಲಪದವು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ (ರಿ.), ಗಡಿನಾಡ ಧ್ವನಿ ಪತ್ರಿಕೆ ಮತ್ತು ಪ್ರಕಾಶನ ಇದರ ಆಶ್ರಯದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ, ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆ ಒಡ್ಯ ಇವರ ಸಹಕಾರದೊಂದಿಗೆ ಕರ್ನಾಟಕ ಘನ ಸರಕಾರದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕೆದಂಬಾಡಿ ಜತ್ತಪ್ಪ ರೈ ವೇದಿಕೆ, ಕಾಕೆಕೊಚ್ಚಿ ಈಶ್ವರ ಭಟ್ ಸಭಾಂಗಣ, ಮಣ್ಣಂಗಳ ಶ್ಯಾಮ ಭಟ್ ಮಹಾದ್ವಾರದ ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆ ಒಡ್ಯದಲ್ಲಿ ಸಮ್ಮೇಳನ ನಡೆಯಲಿದ್ದು, ಹಿರಿಯ ಪತ್ರಕರ್ತರೂ, ಸಾಹಿತಿಗಳೂ ಆಗಿರುವ ಕಾಸರಗೋಡಿನ ಮಲಾರ್ ಜಯರಾಮ ರೈ ಇವರ ಸಮ್ಮೇಳನಾಧ್ಯಕ್ಷತೆಯಲ್ಲಿ ಸಮ್ಮೇಳ ನಡೆಯಲಿದೆ ಎಂದು ಅವರು ಹೇಳಿದರು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀ ಗುರುದೇವಾನಂದ ಸ್ವಾಮೀಜಿ, ಗಾಳಿಮುಖ ಖಲೀಲ್ ಸ್ವಲಾಹ್ ವಿದ್ಯಾಸಂಸ್ಥೆಯ ಸಂಚಾಲಕ ಅಸ್ಸಯ್ಯದ್ ಹಸನ್ ಅಬ್ದುಲ್ಲ ಇಂಬಿಚಿ ಕೋಯ ತಂಙಳ್ ಆದೂರು, ನಿಡ್ಪಳ್ಳಿ ಹೋಲಿ ರೋಝರಿ ಇಗರ್ಜಿಯ ಧರ್ಮಗುರುಗಳಾದ ರೆ.ಫಾ.ಜೈಸನ್ ಲೋಬೋ, ಕಾಟುಕುಕ್ಕೆ ಶ್ರೀ ಮಧ್ವಾಧೀಶ ವಿಠಲದಾಸ, ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದ ಅಧ್ಯಕ್ಷ ನಾರಾಯಣನ್ ಇವರ ಉಪಸ್ಥಿತಿಯಲ್ಲಿ ಹಿರಿಯ ಸಾಹಿತಿ ಎಸ್.ಜಿ.ಕೃಷ್ಣ ಸಮ್ಮೇಳನವನ್ನು ಉದ್ಘಾಟಿಸಲಿರುವರು.

ಶಾಸಕ ಸಂಜೀವ ಮಠಂದೂರು ಪುಸ್ತಕ ಬಿಡುಗಡೆಯನ್ನೂ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಪುಸ್ತಕ ಮಳಿಗೆ ಉದ್ಘಾಟನೆಯನ್ನೂ, ಪುತ್ತೂರು ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಕಲಾ ಪ್ರದರ್ಶನ ಉದ್ಘಾಟನೆಯನ್ನೂ, ಮಂಗಳೂರು ಡಿಡಿಪಿಐ ಸುಧಾಕರ ಕೆ ಚಿಗುರು ಹಸ್ತ ಪ್ರತಿ ಬಿಡುಗಡೆಯನ್ನೂ, ರೈ ಎಸ್ಟೇಟ್ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಪ್ರವರ್ತಕರಾದ ಅಶೋಕ ರೈ ಕೋಡಿಂಬಾಡಿ ಟ್ರಸ್ಟ್ ನ ಲಾಂಛನವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿರುವರು.

ಕಾರ್ಯಕ್ರಮದಲ್ಲಿ ಗಡಿನಾಡ ಧ್ವನಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ ಸೋಜಾ ಮತ್ತು ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಪ್ರಶಸ್ತಿ ಪ್ರದಾನ ಮಾಡಲಿರುವರು. ಮಧು ಪ್ರಪಂಚದ ಸಂಪಾದಕರಾದ ಹಿರಿಯ ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ ನಿಕಟಪೂರ್ವ ಸಮ್ಮೇಳನಾಧ್ಯಕ್ಷರ ಭಾಷಣ ಮಾಡಲಿರುವರು. ಅಕ್ಷಯ ಸಮೂಹ ಸಂಸ್ಥೆಗಳ ಸಂಚಾಲಕರಾದ ಜಯಂತ ನಡುಬೈಲು, ದಾವಣಗೆರೆಯ ನ್ಯಾಯವಾದಿ ಡಾ.ಎಸ್.ಹೆಚ್ ವಿನಯಕುಮಾರ್ ಸಾಹುಕಾರ್, ಎಣ್ಮಕಜೆ ಪಂಚಾಯತ್ ಅಧ್ಯಕ್ಷರಾದ ಸೋಮಶೇಖರ, ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತೀ ಭಟ್, ಬಿಜೆಪಿ ಪುತ್ತೂರು ಮಂಡಲಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ , ಶಿವರಾಮ ಕಾಸರಗೋಡು, ಪುತ್ತೂರು ತಾಲೂಕು ಸೀರತ್ ಕಮಿಟಿ ಅಧ್ಯಕ್ಷ ಸುರಯ್ಯ ಅಬ್ದುಲ್ ಖಾದರ್ ಹಾಜಿ ಸೇರಿದಂತೆ ಹಲವಾರು ಪ್ರಮುಖರು ಮುಖ್ಯ ಅತಿಥಿಗಳಾಗಿ ಉಪಸ್ಥಿತಲಿರುವರು ಎಂದು ಅವರು ಹೇಳಿದರು.

ಬೆಳಿಗ್ಗೆ ಮೆರವಣಿಗೆ, ವಿಚಾರ ಸಂಕಿರಣ, ಕವಿಗೋಷ್ಠಿ, ಬಹಿರಂಗ ಅಧಿವೇಶನ:
ಬೆಳಿಗ್ಗೆ 7ರಿಂದ ಪ್ರಾರಂಭವಾಗಲಿರುವ ಭಜನಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ವೈಭವಕ್ಕೆ ಸಮ್ಮೇಳನ ಸ್ವಾಗತ ಸಮಿತಿ ಸಂಚಾಲಕ ಶ್ರೀ ಕೃಷ್ಣ ಭಟ್ ಬಟ್ಯಮೂಲೆ ಗಣ್ಯರ ಉಪಸ್ಥಿತಿಯಲ್ಲಿ ಚಾಲನೆ ನೀಡಲಿರುವರು. ಬೆಳಿಗ್ಗೆ 9ಕ್ಕೆ ಸುಂದರಗಿರಿಯಿಂದ ಸಮ್ಮೇಳನ ಸಭಾಂಗಣಕ್ಕೆ ನಡೆಯಲಿರುವ ವೈಭವದ ಮೆರವಣಿಗೆಯನ್ನು ಹಲವಾರು ಗಣ್ಯರ ಉಪಸ್ಥಿತಿಯಲ್ಲಿ ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತಿ ಭಟ್ ಉದ್ಘಾಟನೆ ಮಾಡಲಿರುವರು. ಬಳಿಕ ಗಡಿನಾಡು ಹೊರನಾಡು ಕನ್ನಡಿಗರ ಸವಾಲು, ಕನ್ನಡ ಭಾಷಾ ಅಲ್ಪಸಂಖ್ಯಾತರ ಮತ್ತು ಗಡಿನಾಡ ಜನತೆಯ ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳ ಕುರಿತು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ. ಅಪರಾಹ್ನ ಬಹುಭಾಷಾ ಕವಿಗೋಷ್ಠಿ, ಬಳಿಕ ಬಹಿರಂಗ ಅಧಿವೇಶನ ಮತ್ತು ಠರಾವು ಮಂಡನೆ ನಡೆಯಲಿದೆ. ಸಮ್ಮೇಳನ ಸ್ವಾಗತ ಸಮಿತಿ ಗೌರವಾಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಠರಾವು ಮಂಡನೆ ಮಾಡಲಿದ್ದಾರೆ ಎಂದು ಅಬೂಬಕ್ಕರ್ ಆರ್ಲಪದವು ತಿಳಿಸಿದರು.

ಸಮಾರೋಪ:
ಗಡಿನಾಡ ಧ್ವನಿ ಪ್ರಶಸ್ತಿ ಪ್ರಧಾನ ಮತ್ತು ಸಮಾರೋಪ ಸಮಾರಂಭವು ಪ್ರಥಮ ಗಡಿನಾಡ ಸಮ್ಮೇಳನಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವುದು. ಕರಾಡವಾಣಿ ಪತ್ರಿಕೆಯ ವ್ಯವಸ್ಥಾ ಪ್ರಮುಖರಾದ ಪಿಲಿಂಗಲ್ಲು ಕೃಷ್ಣ ಭಟ್ ಸಮಾರೋಪ ಭಾಷಣವನ್ನೂ, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಎಂ.ಪಿ.ಶ್ರೀನಾಥ್ ರವರು ದಿಕ್ಸೂಚಿ ಭಾಷಣವನ್ನು ಮಾಡಲಿರುವರು. ಕರ್ನಾಟಕ ಸರಕಾರದ ವಿರೋಧ ಪಕ್ಷದ ನಾಯಕರಾದ ಯು ಟಿ ಖಾದರ್, ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ,ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯರಾದ ನಾರಾಯಣ ನಾಯಕ್ ಅಡ್ಕಸ್ಥಳ ಇವರು ಗಡಿನಾಡ ಧ್ವನಿ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಲಿರುವರು.

ಭಾಗವಹಿಸಿದ ಭಜನಾ ತಂಡಗಳಿಗೆ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಮತ್ತು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ.ಎಸ್ ಮುಹಮ್ಮದ್ ಪ್ರಮಾಣ ಪತ್ರ ಪ್ರದಾನ ಮಾಡಲಿರುವರು. ಭಾಷಣ ಸ್ಪರ್ಧೆಯ ವಿಜೇತರಿಗೆ ಪುತ್ತೂರು ರೋಟರಿ ಕ್ಲಬ್ ಯುವ ಇದರ ಅಧ್ಯಕ್ಷರಾದ ರೋ.ರಾಜೇಶ್ವರಿ ಆಚಾರ್, ಜನ್ಮ ಪೌಂಡೇಷನ್ ಟ್ರಸ್ಟ್ ಅಧ್ಯಕ್ಷರಾದ ಡಾ.ಹರ್ಷಕುಮಾರ್ ರೈ ಮಾಡಾವು, ದ.ಕ.ಜಿ.ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ ನಾಯಕ್ ಬಹುಮಾನ ವಿತರಣೆ ಮಾಡಲಿರುವರು.

ಈ ಸಂದರ್ಭದಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ ಎಸ್ ಆರ್, ಕಂಕನಾಡಿ ಫಾದರ್ ಮುಲ್ಲರ್ ವಾಕ್ ಶ್ರವಣ ಪ್ರಾಂಶುಪಾಲರಾದ ಪ್ರೊ.ಅಖಿಲೇಶ ಎಂ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ.ವಿಶ್ವನಾಥ ರೈ, ಜೆಡಿಎಸ್ ತಾಲೂಕು ಅಧ್ಯಕ್ಷರಾದ ಅಶ್ರಫ್ ಕಲ್ಲೆಗ, ಎಸ್ ಡಿಪಿಐ ತಾಲೂಕು ಅಧ್ಯಕ್ಷರಾದ ಇಬ್ರಾಹಿಂ ಸಾಗರ್, ನ್ಯಾಯವಾದಿ ಶಂಭು ಭಟ್, ಅರಿಯಡ್ಕ ಅಬ್ದುಲ್ ರಹಿಮಾನ್ ಹಾಜಿ, ಬದಿಯಡ್ಕ ನಿವೃತ್ತ ಸಬ್ ರಿಜಿಸ್ಟ್ರಾರ್ ಮುಹಮ್ಮದ್ ಆಲಿ ಸೇರಿದಂತೆ ಹಲವಾರು ಮಂದಿ ವೇದಿಕೆಯಲ್ಲಿ ಉಪಸ್ಥಿತರಿರುವರು ಎಂದು ಅಬೂಬಕ್ಕರ್ ಆರ್ಲಪದವು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಈಶ್ವರ ಭಟ್ ಕಡಂದೇಲು, ಸ್ವಾಗತ ಸಮಿತಿ ಗೌರವಾಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಸಂಚಾಲಕ ಕೃಷ್ಣ ಭಟ್ ಬಟ್ಯಮೂಲೆ, ಎಸ್‌ಡಿಎಮ್‌ಸಿ ಅಧ್ಯಕ್ಷ ದೇವಪ್ಪ ನಾಯ್ಕ ಕೊಂದಲ್ಕಾನ ಉಪಸ್ಥಿತರಿದ್ದರು.

ಸಾಹಿತ್ಯ ಸಂಭ್ರಮದ 4ನೇ ಸರಣಿ ಕಾರ್ಯಕ್ರಮ
ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆಯುತ್ತಿರುವ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದಲ್ಲಿ ನಡೆಯುತ್ತಿರುವ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮದ 4ನೇ ಕಾರ್ಯಕ್ರಮ ಗಡಿನಾಡ ಸಮ್ಮೇಳನದ ಜೊತೆಗೆ ನಡೆಯಲಿದೆ. ಮಿತ್ರಂಪಾಡಿ ಜಯರಾಮ ರೈ ಅವರ ಪೋಷಕತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಪತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರು ತಿಳಿಸಿದರು.

LEAVE A REPLY

Please enter your comment!
Please enter your name here