ಪುತ್ತೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಪನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳು ತಮ್ಮ ಸಾಧನೆಯ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ರಿಯೋನ್ ಲಸ್ರಾದೋ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, ರಿಶೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಇವರು ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ನಿವಾಸಿಗಳಾದ ರೋಶನ್ ಲಸ್ರಾದೋ ಮತ್ತು ಸುಶಾಂತಿ ರೋಡ್ರಿಗಸ್ ದಂಪತಿಗಳ ಪುತ್ರರಾಗಿದ್ದಾರೆ. ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾಗಿರುವ ಇವರಿಗೆ ವಿಟ್ಲದ ಮಾಧವ ಅಳಿಕೆ ಮತ್ತು ಕಬಕ ರೋಹಿತ್ ಎಸ್ ಎನ್ ಕರಾಟೆ ತರಬೇತಿ ನೀಡಿರುತ್ತಾರೆ.