ಪುತ್ತೂರು: ಒಳಮೊಗ್ರು ಗ್ರಾಮದ ಸದಾಶಿವನಗರದ ಶ್ರೀ ಸದಾಶಿವ ಭಜನಾ ಮಂದಿರದ 31 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಆಶ್ಲೇಷ ಬಲಿ ಹಾಗೂ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಫೆ.23 ರಂದು ಭಜನಾ ಮಂದಿರದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಣಪತಿ ಹೋಮ ನಡೆದು ಸಕಲ ಕಷ್ಟ ಪರಿಹಾರಾರ್ಥವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಆಶ್ಲೇಷ ಬಲಿ ನಡೆಯಲಿದೆ. ಮಧ್ಯಾಹ್ನ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ ಭಜನಾ ಕಾರ್ಯಕ್ರಮ ಆರಂಭಗೊಂಡು ಸಂಜೆ ಮಂಗಳಾರತಿ ನಡೆಯಲಿದೆ.
ಸಂಜೆ ಗಂಟೆ 6 ರಿಂದ ಶ್ರೀ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಗಂಧ ಪ್ರಸಾದ ಹಾಗೂ ಅನ್ನಪ್ರಸಾದ ಸ್ವೀಕರಿಸುವಂತೆ ಭಜನಾ ಮಂದಿರದ ಅಧ್ಯಕ್ಷ ರಮೇಶ್ ಆಳ್ವ ಕಲ್ಲಡ್ಕ, ಕಾರ್ಯದರ್ಶಿ ಅಕ್ಷಯ್ ಬಿ.ಎನ್, ಉಪಾಧ್ಯಕ್ಷ ವಿಶ್ವನಾಥ ಕುಲಾಲ್, ಜತೆ ಕಾರ್ಯದರ್ಶಿ ಶಶಾಂಕ್ ರೈ ಹಾಗೂ ಸರ್ವ ಸದಸ್ಯರುಗಳು ಮತ್ತು ಊರ ಹತ್ತು ಸಮಸ್ತರ ಪ್ರಕಟಣೆ ತಿಳಿಸಿದೆ.
ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
ಆಶ್ಲೇಷ ಬಲಿ, ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ.