ಫೆ.24: ಪುತ್ತೂರು ರೋಟರಿ ಕ್ಲಬ್ ಗೆ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

0

ಪುತ್ತೂರು: ಅಂತರ್ರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಸಂಸ್ಥೆಗೆ ರೋಟರಿ ಜಿಲ್ಲಾ ಗವರ್ನರ್ ಮೇಜರ್ ಡೋನರ್ ಪ್ರಕಾಶ್ ಕಾರಂತ್ ರವರು ಫೆ.24 ರಂದು ಅಧಿಕೃತ ಭೇಟಿ ನೀಡಲಿದ್ದಾರೆ.

ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ರವರು ರೋಟರಿ ಕ್ಲಬ್ ಪುತ್ತೂರು ಹಮ್ಮಿಕೊಳ್ಳಲಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದು ಬಳಿಕ ಪುತ್ತೂರಿನ ಹೊರ ವಲಯದಲ್ಲಿರುವ ಮರೀಲಿನ ದಿ ಪುತ್ತೂರು ಕ್ಲಬ್ ನಲ್ಲಿ ಸಂಜೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ರೋಟರಿ ವಲಯ ಐದರ ಅಸಿಸ್ಟೆಂಟ್ ಗವರ್ನರ್ ಎ.ಜಗಜೀವನ್ ದಾಸ್ ರೈ, ವಲಯ ಸೇನಾನಿ ಪುರಂದರ ರೈಯವರು ಉಪಸ್ಥಿತಲಿರುವರು ಎಂದು ರೋಟರಿ ಪುತ್ತೂರು ಅಧ್ಯಕ್ಷ ಉಮಾನಾಥ್ ಪಿ.ಬಿ, ಕಾರ್ಯದರ್ಶಿ ಡಾ.ಶ್ರೀಪ್ರಕಾಶ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here