ಫೆ.25: ಸೇರ ಕೋಟಿಯಪ್ಪ ಪೂಜಾರಿಯವರಿಗೆ ಗಡಿನಾಡ ಧ್ವನಿ ಜ್ಞಾನ ಸಿಂಧು ರಾಷ್ಟ್ರೀಯ ಪುರಸ್ಕಾರ ಪ್ರಶಸ್ತಿ ಪ್ರದಾನ

0

ಪುತ್ತೂರು: ಗಡಿನಾಡ ಧ್ವನಿ, ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಆಶ್ರಯದಲ್ಲಿ 6ನೇ ಕರ್ನಾಟಕ ಗಡಿನಾಡ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ನಾಡಿಗೆ ಸಲ್ಲಿಸುತ್ತಿರುವ ಸಾಧನೆ, ಕೊಡುಗೆಗಳನ್ನು ಪರಿಗಣಿಸಿ ನೀಡಲ್ಪಡುವ ಗಡಿನಾಡ ಧ್ವನಿ ಜ್ಞಾನಸಿಂಧು ರಾಷ್ಟ್ರೀಯ ಪುರಸ್ಕಾರಕ್ಕೆ, ಶೈಕ್ಷಣಿಕ, ಸಾಹಿತ್ಯ ಕ್ಷೇತ್ರದಲ್ಲಿ ಹಲವಾರು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸುತ್ತಿರುವ ಸೇರ ಕೋಟಿಯಪ್ಪ ಪೂಜಾರಿ ಆಯ್ಕೆಯಾಗಿರುತ್ತಾರೆ.

ಪ್ರಶಸ್ತಿ ಪ್ರದಾನವು -. ೨೫ರಂದು ೬ನೇ ಕರ್ನಾಟಕ ಗಡಿನಾಡ ಸಮ್ಮೇಳನದಲ್ಲಿ ಗಡಿಪ್ರದೇಶವಾದ ಒಡ್ಯ ಸರಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.

ಹಲವಾರು ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿರುವ ಕೋಟಿಯಪ್ಪ ಪೂಜಾರಿಯವರು ಲೇಖಕ, ಕವನಗಾರ, ಉತ್ತಮ ಬರಹಗಾರ ಮತ್ತು ಸಂಘಟಕರಾಗಿರುತ್ತಾರೆ.

LEAVE A REPLY

Please enter your comment!
Please enter your name here