ಪುತ್ತೂರು: ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ಸಾಲ್ಮರ ಇದರ ವತಿಯಿಂದ ನಡೆಯಲ್ಪಡುವ 44ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಫೆ. 26ರಂದು ಸಂಜೆ ಸಾಲ್ಮರ ಕಟ್ಟೆಯ ವಠಾರದಲ್ಲಿ ಜರುಗಲಿದೆ.
ಬೆಳಿಗ್ಗೆ ಗಣಪತಿ ಹೋಮ, ಸಂಜೆ ಶ್ರೀ ಸತ್ಯನಾರಾಯಣ ಪೂಜೆ, ರಾತ್ರಿ ಭಜನಾ ಕಾರ್ಯಕ್ರಮ ಬಳಿಕ ಧಾರ್ಮಿಕ ಉಪನ್ಯಾಸ ನಡೆಯಲಿದೆ. ಹಿಂದು ಜಾಗರಣ ವೇದಿಕೆ ಪ್ರಾಂತ ಪ್ರಶಿಕ್ಷಣಾ ಪ್ರಮುಖ್ ಶ್ರೀ ರಾಧಾಕೃಷ್ಣ ಅಡ್ಯಂತಾಯ ಅವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ರಾತ್ರಿ ಶ್ರೀ ಸತ್ಯನಾರಾಯಣ ಪೂಜೆ ಮಂಗಳಾರತಿ, ಪ್ರಸಾದ ವಿತರಣೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಸಮಿತಿ ಗೌರವಾಧ್ಯಕ್ಷ ಡಾ. ಎಂ.ಕೆ.ಪ್ರಸಾದ್ ಮತ್ತು ಅಧ್ಯಕ್ಷ ಮಾಧವ ರೈ ಸಾಲ್ಮರ ಅವರು ತಿಳಿಸಿದ್ದಾರೆ.