ಕೆಯ್ಯೂರು : ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಪ್ರಧಾನಮಂತ್ರಿ ಪೋಷನ್ ಶಕ್ತಿ ನಿರ್ಮಾಣ್ ಮಕ್ಕಳ ಮಧ್ಯಾಹ್ನದ ಉಪಾಹಾರದ ಯೋಜನೆಯಡಿಯಲ್ಲಿ ಸಾಮಾಜಿಕ ಪರಿಶೋಧನೆಯ ಪಾಲಕರ ಮತ್ತು ಪೋಷಕರ ಸಭೆಯು ಮೂರು ದಿನಗಳ ಕಾಲ ಕೆಪಿಎಸ್ ಪ್ರಾಥಮಿಕ ವಿಭಾಗ ಕೆಯ್ಯೂರಿನಲ್ಲಿ ಫೆ.23ರವರಗೆ ನಡೆಯಿತು.
ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕಿ ರೇಖಾ ಸಭೆಯ ಅಧ್ಯಕ್ಷತೆ ವಹಿಸಿ ಮಕ್ಕಳಲ್ಲಿ ಸಾಮಾಜಿಕ ಪರಿಶೋಧನೆಯ ಮಹತ್ವ, ಪಾರದರ್ಶಕತೆ, ಉತ್ತರ ದಾಯಿತ್ವತೆಯ ಬಗ್ಗೆ ಮಾಹಿತಿಯನ್ನು ಮಂಡಿಸಿದರು. ಮುಖ್ಯ ಅತಿಥಿ ದ.ಕ.ಜಿಲ್ಲಾ ಅಕ್ಷರದಾಸೋಹ ನೋಡೆಲ್ ಅಧಿಕಾರಿ ಡಾ.ಉಷಾ ಮಾತನಾಡಿ, ಮಕ್ಕಳಿಗೆ ಸರಕಾರದ ವತಿಯಿಂದ ಸಿಗುವ ಪ್ರಧಾನಮಂತ್ರಿ ಪೋಷನ್ ಶಕ್ತಿ ನಿರ್ಮಾಣ್ ಮದ್ಯಾಹ್ನ ಉಪಾಹಾರ ಯೋಜನೆಯಲ್ಲಿ ಮಕ್ಕಳಿಗೆ ದೊರೆಯುವ ಆಹಾರದ ಕುರಿತು ಪೋಷಕರಿಗೆ ಮಾಹಿತಿಯನ್ನು ನೀಡಿದರು.
ಕೆಯ್ಯೂರು ಗ್ರಾ. ಪಂ ಅಧ್ಯಕ್ಷೆ ಜಯಂತಿ ಎಸ್ ಭಂಡಾರಿ, ಸದಸ್ಯ ಜಯಂತ ಪೂಜಾರಿ ಕೆಂಗುಡೇಲು, ಕೆಪಿಎಸ್ ಕೆಯ್ಯೂರು ಎಸ್ ಡಿ ಎಂಸಿ ಉಪಾಧ್ಯಕ್ಷ ಚರಣ್ ಕುಮಾರ್ ಸಣಂಗಳ, ಕೆಪಿಎಸ್ ಕೆಯ್ಯೂರು ಪ್ರಾಂಶುಪಾಲ ಇಸ್ಮಾಯಿಲ್, ಉಪಪ್ರಾಂಶುಪಾಲ ವಿನೋದ್ ಕುಮಾರ್ ಕೆ.ಎಸ್, ಸಾಮಾಜಿಕ ಪರಿಶೋಧನ ಕಡಬ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಪ್ರವೀಣ್, ಸಾಮಾಜಿಕ ಪರಿಶೋಧನ ಪುತ್ತೂರು ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಸೌಮ್ಯ ನಾಯ್ಕ, ಗ್ರಾಮ ಸಂಪನ್ಮೂಲ ವ್ಯಕ್ತಿ ದೀಪಿಕ ಮತ್ತು ಚಂಚಲ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಧಿಕಾರಿಗಳು 78 ವಿದ್ಯಾರ್ಥಿಗಳ ಮನೆಗಳಿಗೆ ಸಂದರ್ಶಿಸಿ ಮಕ್ಕಳಿಗೆ ಶಾಲೆಯಲ್ಲಿ ಸಿಗುವ ಆಹಾರದ ಬಗ್ಗೆ ಪೋಷಕರಲ್ಲಿ ವಿಚಾರಿಸಿದಾಗ ಮಕ್ಕಳಿಗೆ ಬಿಳಿ ಅಕ್ಕಿಯ ಬದಲು ಕುಚ್ಚಲಕ್ಕಿ ಮತ್ತು ತೊಗರಿಬೆಳೆಯ ಬದಲು ದ್ವಿದಳ ಧ್ಯಾನ ಕೊಡಿ ಎಂದು ಪ್ರಸ್ತಾಪಿಸಿದರು.
ಮೂರು ದಿನಗಳ ಕಾಲ ಶಾಲೆಯ ಮಧ್ಯಾಹದ ಉಪಹಾರದ ವರದಿಯನ್ನು ಮಂಡಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕವೃಂದ, ಎಸ್.ಡಿ.ಎಂ.ಸಿ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕೆಪಿಎಸ್ ಪ್ರಾಥಮಿಕ ವಿಭಾಗ ಮುಖ್ಯಗುರು ಬಾಬು.ಎಂ ಪ್ರಾಸ್ತಾವಿಕವಾಗಿ ಸ್ವಾಗತಿಸಿ, ವಂದಿಸಿದರು.