ನೂರಾರು ವಾಹನಗಳಲ್ಲಿ ಅಲಂಕರಿಸಲ್ಪಟ್ಟ ಹಸಿರುವಾಣಿ ವಿಶೇಷ ಆಕರ್ಷಣೆ
ಪುತ್ತೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರ ಮತ್ತು ಸಪರಿವಾರ ದೇವರುಗಳ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಫೆ.24ರಂದು ವೈಭವದ ಹಸಿರು ಹೊರೆಕಾಣಿಕೆ ಮೆರವಣಿಗೆಯು ಚೆಂಡೆ ವಾದನ, ಗೊಂಬೆ ಕುಣಿತದೊಂದಿಗೆ ಮತ್ತು ಹಸಿರುವಾಣಿಯನ್ನು ವಾಹನಗಳಲ್ಲಿ ವಿಶೇಷ ರೀತಿಯಲ್ಲಿ ಅಲಂಕರಿಸುವ ಮೂಲಕ ಆಕರ್ಷಣಿಯವಾಗಿ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾರ್ಶಿವಾದದೊಂದಿಗೆ ಶ್ರೀ ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಮಾ.5ರ ತನಕ ನಡೆಯಲಿರುವ ಬ್ರಹ್ಮಕಲಶೋತ್ಸವಕ್ಕೆ ನಡೆದ ಹೊರೆಕಾಣಿಕೆ ಮೆರವಣಿಗೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ್ ನಾರಾವಿ ಅವರು ದೀಪ ಪ್ರಜ್ವಲಿಸಿ, ತೆಂಗಿನ ಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.
ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ಶಿವಪ್ರಸಾದ್ ರೈ, ಜನಜಾಗೃತಿ ವೇದಿಕೆ ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಹಸಿರುವಾಣಿ ಸಮಿತಿ ಸಂಚಾಲಕ ಲಿಂಗಪ್ಪ ಗೌಡ ಮೋಡಿಕೆ, ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀನಿವಾಸ ಭಟ್ ಚಂದುಕೂಡ್ಲು, ಜಿರ್ಣೋದ್ದಾರ ಸಮಿತಿ ಕಾರ್ಯಾಲಯ ಸಮಿತಿ ಮುಖ್ಯಸ್ಥ ಮನೋಜ್ ರೈ ಪೇರಾಲು, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ಮನೋಹರ ಪ್ರಸಾದ್ ರೈ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಜ್ ರೈ ಪೇರಾಲು, ಬ್ರಹ್ಮಕಲಶೋತ್ಸವ ಅರ್ಥಿಕ ಸಮಿತಿ ಅಧ್ಯಕ್ಷ ನಾರಾಯಣ ಭಟ್ ಬಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ವಿಷ್ಣು ಭಟ್ ಪಡ್ಪು, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಚಂದ್ರಶೇಖರ ಆಳ್ವ ಗಿರಿಮನೆ, ನಾರಾಯಣ ಭಟ್ ಪಟ್ಟೆ, ಪ್ರಭಾಕರ ಗೌಡ ಕನ್ನಯ, ಅಪ್ಪಯ್ಯ ನಾಯ್ಕ, ತಿಲೋತ್ತಮಾ, ಸುಮಿತ್ರಾ ಯು.ಕೆ, ಅರ್ಚಕ ಮಹಾಲಿಂಗ ಭಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅರಿಯಡ್ಕ ವಲಯ ಮೇಲ್ವಿಚಾರಕ ಮೋಹನ್ ಕೆ, ಜೀರ್ಣೋದ್ಧಾರ ಸಮಿತಿಯ ಶ್ರೀನಿವಾಸ ಗೌಡ, ಕನ್ನಯ, ಜನಾರ್ದನ ಪುಜಾರಿ ಪದಡ್ಕ, ಸುಧಾಕರ ಶೆಟ್ಟಿ ಮಂಗಳದೇವಿ, ಅಚ್ಚುತ ಭಟ್ ಪೈರುಪುಣಿ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ರಾಮಣ್ಣ ಗೌಡ, ಸುಬ್ಬಯ್ಯ ರೈ ಹಲಸಿನಡಿ, ಸಹ ಸಂಚಾಲಕ ಉದಯ ಪಾಟಾಳಿ ಶರವು, ಪ್ರಕಾಶ್ ಕೋಡಿಯಡ್ಕ, ಶ್ರೀಮತಿ ಕೆ, ಸಂತೋಷ್ ಆಳ್ವ, ಹೇಮಾವತಿ ಬಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.
ಆಕರ್ಷಣೆ ನೀಡಿದ ಮೆರವಣಿಗೆ:
ಹಸಿರು ಹೊರೆಕಾಣಿಕೆ ಮೆರವಣಿಗೆಯಲ್ಲಿ ಸಿಂಗಾರಿ ಮೇಳದಿಂದ ಚೆಂಡೆ, ವಾದ್ಯಘೋಷ, ಗೊಂಬೆಗಳ ಕುಣಿತ, ಬಣ್ಣ ಬಣ್ಣದ ಕೊಡೆಗಳನ್ನು ಹಿಡಿದ ಕೇಸರಿ ಶಾಲು ಧರಿಸಿದ ಮಹಿಳೆಯರು, ಕೇಸರಿ ಧ್ವಜ ಹಿಡಿದ ಯುವಕರು, ಮೆರವಣಿಗೆಗೆ ಆಕರ್ಷಣೆ ನೀಡಿತ್ತು. ಮೆರವಣಿಗೆ ಪುತ್ತೂರು ಮಹಾಲಿಂಗೇಶ್ವರ ಸನ್ನಿಧಿಯಿಂದ ಸಂಟ್ಯಾರು, ಕುಂಬ್ರ, ಕೌಡಿಚ್ಚಾರ್, ಪೆರೀಗೇರಿ ಮಾರ್ಗವಾಗಿ ಶ್ರೀ ಕ್ಷೇತ್ರ ಪಡುಮಲೆಗೆ ತೆರಳಿತು.