ಪುತ್ತೂರು: ಕರ್ಮಲ ಬನ್ನೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಫೆ.25ಮತ್ತು 26ರಂದು ಕುಕ್ಕಾಡಿ ಪ್ರೀತಂ ಪುತ್ತೂರಾಯರ ನೇತೃತ್ವದಲ್ಲಿ ನಡೆಯಲಿದೆ.
ಫೆ.25ರಂದು ಬೆಳಿಗ್ಗೆ 8ರಿಂದ ಗಣಪತಿ ಹವನ, ಕಲಶ ಪೂಜೆ, ಕಲಶಾಭಿಷೇಕ, ಸಾಮೂಹಿಕ ಆಶ್ಲೇಷ ಬಲಿಪೂಜೆ, ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ದೇವರ ಉತ್ಸವ, ದರ್ಶನ ಬಲಿ, ಬಟ್ಟಲುಕಾಣಿಕೆ, ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಫೆ.26ರಂದು ಬೆಳಿಗ್ಗೆ 9.30ರಿಂದ ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ, ಮಹಾಪೂಜೆ, ಶ್ರೀದೇವಿ ದರ್ಶನ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಭಜನೆ, ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ, ದೈವಗಳ ಭಂಡಾರ ಆಗಮನ ಬಳಿಕ ಕಲ್ಲುರ್ಟಿ, ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ.
ಅನ್ನಛತ್ರ ಉದ್ಘಾಟನೆ
ದೇವಾಲಯದಲ್ಲಿ ನೂತನವಾಗಿ ನಿರ್ಮಿಸಿದ ಅನ್ನಛತ್ರದ ಉದ್ಘಾಟನೆ ಫೆ.25ರಂದು ಸಂಜೆ 5.30ರಿಂದ ನಡೆಯಲಿದೆ. ಶಾಸಕ ಸಂಜೀವ ಮಠಂದೂರು ಅನ್ನಛತ್ರ ಉದ್ಘಾಟಿಸಲಿದ್ದಾರೆ. ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅಧ್ಯಕ್ಷತೆ ವಹಿಸಲಿದ್ದಾರೆ.