ಫಿಲೋಮಿನಾ ಕಾಲೇಜಿನ ಎಂ.ಎಸ್.ಡಬ್ಲ್ಯೂ ವಿಭಾಗದಿಂದ 5ರಿಂದ 7ನೇ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವುದು ಹೇಗೆ? ಮಾಹಿತಿ ಕಾರ್ಯಾಗಾರ

0

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ಎಂ.ಎಸ್.ಡಬ್ಲ್ಯೂ, (ಸ್ನಾತಕೋತ್ತರ ಸಮಾಜಕಾರ್ಯ) ವಿಭಾಗ ಮತ್ತು ಕೋಡಿಂಬಾಡಿ ಹಿ.ಪ್ರಾ.ಶಾಲೆಯ ಜಂಟಿ ಆಶ್ರಯದಲ್ಲಿ 5 ರಿಂದ 7ನೇ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸುವುದು ಹೇಗೆ? ಮಾಹಿತಿ ಕಾರ್ಯಕ್ರಮ ಆಯೋಜಿಸಲಾಯಿತು.

ಕೋಡಿಂಬಾಡಿ ಗ್ರಾಮ ಪಂಚಾಯಿತ್ ಅಧ್ಯಕ್ಷ ಕೆ. ರಾಮಚಂದ್ರ ಪೂಜಾರಿ ಉದ್ಘಾಟಿಸಿ ಮಾತನಾಡಿ ಶುಭಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಪ್ರೋಗ್ರಾಂ ಮ್ಯಾನೇಜರ್ ಭಾರತೀಯ ವಿಕಾಸ್ ಟ್ರಸ್ಟ್‌ನ ಜೀವನ್ ಮಾತನಾಡಿ ಪರೀಕ್ಷೆ ಎಂಬುದು ಒಂದು ನಮ್ಮ ಬರೆಯುವ ಸಾಮರ್ಥ್ಯವನ್ನು ಅಳೆಯುವ ಮಾಪನವಷ್ಟೆ. ನಮ್ಮ ಸತತ ಪ್ರಯತ್ನವಿದ್ದರೆ ಪರೀಕ್ಷೆಯನ್ನು ಸುಲಭವಾಗಿ ಎದುರಿಸಬಹುದು ಎಂಬುದನ್ನು ತಿಳಿಸಿ ವಿದ್ಯಾರ್ಥಿ ಜೀವನದಲ್ಲಿ ಓದುವ ಹವ್ಯಾಸವನ್ನು ಹೇಗೆ ಬೆಳೆಸಿಕೊಳ್ಳಬೇಕು ಮತ್ತು ಹೇಗೆ ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸಬೇಕೆಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕೋಡಿಂಬಾಡಿ ಶಾಲಾ ಮುಖ್ಯಗುರು ಸುಲೋಚನಾ ಕೆ. ಮತ್ತು ಸಂತ ಫಿಲೋಮಿನಾ ಕಾಲೇಜಿನ ಸ್ನಾತ್ತಕೋತ್ತರ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಶ್ರಿಮನಿ ಭಾಗವಹಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸ್ನಾತಕೋತ್ತರ ಸಮಾಜಕಾರ್ಯಾ ವಿಭಾಗದ ವಿದ್ಯಾರ್ಥಿ ಲೀವನ್ ಲೋಬೋ ಸ್ವಾಗತಿಸಿ, ಪೃಥ್ವಿ ವಂದಿಸಿದರು, ಪವಿತ್ರ ಕುಮಾರಿ ಎನ್. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here