ಪುತ್ತೂರು: ಇರ್ದೆ – ಪಳ್ಳಿತ್ತಡ್ಕ ದರ್ಗಾ ಶರೀಫ್ ಇದರ 47ನೇ ಉರೂಸ್ ಕಾರ್ಯಕ್ರಮವು ಫೆ.25ರಂದು ಸಮಾರೋಪಗೊಳ್ಳಲಿದ್ದು ಸಂಜೆ ಸೌಹಾರ್ದ ಸಂಗಮ ಮತ್ತು ರಾತ್ರಿ ಉರೂಸ್ ಕಾರ್ಯಕ್ರಮ ನಡೆಯಲಿದೆ. ಸಂಜೆ 5ಕ್ಕೆ ಕೊರಿಂಗಿಲ ಇಮಾಂ ಅಯ್ಯೂಬ್ ವಹಬಿ ನೇತೃತ್ವದಲ್ಲಿ ಮೌಲೀದ್ ಪಾರಾಯಣ ನಡೆಯಲಿದೆ.
ಸಂಜೆ 7 ಕ್ಕೆ ಸೌಹಾರ್ದ ಸಂಗಮ ಕಾರ್ಯಕ್ರಮ ನಡೆಯಲಿದ್ದು ಕೊರಿಂಗಿಲ ಜಮಾತ್ ಕಮಿಟಿ ಅಧ್ಯಕ್ಷರಾದ ಮಹಮ್ಮದ್ ಕುಂಞಿ ಹಾಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಅಸ್ಸಯ್ಯದ್ ಹಾಶಿಂ ಬಾಅಲವಿ ತಂಳ್ ಕೊರಿಂಗಿಲ ಉದ್ಘಾಟನೆ ಮಾಡಲಿದ್ದು ಹಾರಿಸ್ ಕೌಸರಿ ಕೋಲ್ಪೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ಆನಾಜೆ ರಾಧಾಕೃಷ್ಣ ರೈ, ವಿಧಾನ ಪರಿಷತ್ ಸದಸ್ಯರಾದ ಡಾ| ಮಂಜುನಾಥ ಭಂಡಾರಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಮಾಜಿ ಬ್ಲಾಕ್ ಅಧ್ಯಕ್ಷರಾದ ಕಾವು ಹೇಮನಾಥ ಶೆಟ್ಟಿ, ಉದ್ಯಮಿ, ಕಾಂಗ್ರೆಸ್ ನಾಯಕ ಕೋಡಿಂಬಾಡಿ ಅಶೋಕ್ ಕುಮಾರ್ ರೈ, ಮಾಜಿ ಗ್ರಾಪಂ ಸದಸ್ಯ ರಕ್ಷಣ್ ರೈ ಆನ ಆನಾಜೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ರಾತ್ರಿ 8 ಕ್ಕೆ ಉರೂಸ್ ಸಮಾರೋಪ ಸಮಾರಂಭ ನಡೆಯಲಿದ್ದು ಅಸ್ಸಯ್ಯಿದ್ ಕೆ ಎಸ್ ಆಟಕೋಯಾ ತಂಳ್ ಕುಂಬೋಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೊರಿಂಗಿಲ ಇಮಾಂ ಅಯ್ಯೂಬ್ ವಹಬಿ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಗಾರರಾಗಿ ಆಶಿಕ್ದಾರಿಮಿ ಆಲಪ್ಪುಝ ಭಾಗವಹಿಸಲಿದ್ದಾರೆ. ಸವಾದ್ ತಂಳ್ ಪಾನೂರು ಕೇರಳ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಉರೂಸ್ ಕೊನೆಯಲ್ಲಿ ಅನ್ನದಾನ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.