ವಿಟ್ಲ: ಬೈಕ್ ಅಪಘಾತದಿಂದ ಗಾಯಗೊಂಡಿದ್ದ ಸವಾರ ಮೃತ್ಯು

0

ವಿಟ್ಲ: ಮುಳಿಯದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕೇಪು ಮರಕ್ಕಿನಿ ನಿವಾಸಿ ಜಯಕುಮಾರ ಮೃತಪಟ್ಟವರು.

ಬೈಕ್ ಸ್ಕಿಡ್ ಆಗಿ ಜಯಕುಮಾರ್‌ರವರು ಗಂಭೀರ ಗಾಯಗೊಂಡಿದ್ದು, ಅವರನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here