ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದನೆ ಸೈಂಟ್ ಆಂಟೋನಿಸ್”ಪ್ರೌಢ ಶಾಲೆ ಮತ್ತು ಬಿಷಪ್ ಪೋಳಿಕಾರ್ಪಸ್ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆಯಿತು.
ಉದನೆ ಸೈಂಟ್ ಆಂಟೋನಿಸ್ ಪ್ರೌಢಶಾಲೆಯ ಮುಖ್ಯಗುರು ಶ್ರೀಧರ್ ಗೌಡ ಬಿ., ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಗಣೇಶ್ ಕೈಕುರೆ ಅವರು ದುಶ್ಚಟಗಳಿಂದಾಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ಉದನೆ ಬಿಷಪ್ ಪೋಳಿಕಾರ್ಪಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ಸಿಬಿಚ್ಚನ್, ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ನೆಲ್ಯಾಡಿ ವಲಯ ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.
ನೆಲ್ಯಾಡಿ ವಲಯದ ಮೇಲ್ವಿಚಾರಕ ವಿಜೇಶ್ ಜೈನ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿರಾಡಿ ಒಕ್ಕೂಟದ ಸೇವಾಪ್ರತಿನಿಧಿ ಸುಮಿತ್ರಾ ಶ್ರೀಧರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಪುತ್ತಿಗೆ ಒಕ್ಕೂಟದ ಸೇವಾಪ್ರತಿನಿಧಿ ವಿದ್ಯಾಲಕ್ಷ್ಮಿ , ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.