ಕಾಣಿಯೂರು ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

0

ಪೋಷಕರ ಅಭಿಲಾಷೆಯಂತೆ ವಿದ್ಯಾಭ್ಯಾಸದಲ್ಲಿ ತೊಡಗಿ ಪ್ರಗತಿ ಸಾಧಿಸಿ- ಮಹೇಶ್ ಸವಣೂರು

ಕಾಣಿಯೂರು: ವಿದ್ಯಾರ್ಥಿಗಳು ಕುಟುಂಬದ ಕಣ್ಮಣಿಗಳಾಗಿದ್ದು, ಪೋಷಕರ ಅಭಿಲಾಷೆಯಂತೆ ವಿದ್ಯಾಭ್ಯಾಸದಲ್ಲಿ ತೊಡಗಿ ಪ್ರಗತಿ ಸಾಧಿಸಬೇಕು. ದುಶ್ಚಟ ಒಮ್ಮೆ ಆರಂಭವಾದರೆ ಬದುಕು ವಿನಾಶದ ಹಾದಿಯಲ್ಲಿ ಸಾಗುತ್ತದೆ. ಇದರಿಂದ ವೈಯುಕ್ತಿಕ ಜೀವನದ ಜೊತೆ ಜೊತೆಗೆ ಸಮಾಜದ ಸ್ವಾಸ್ಥ್ಯ ಸಹ ಹಾಳಾಗುತ್ತದೆ ಎಂದು ಸವಣೂರು ವಲಯದ ಜನಾಜಾಗೃತಿ ವೇದಿಕೆಯ ಅಧ್ಯಕ್ಷರು, ನ್ಯಾಯವಾದಿ ಮಹೇಶ್ ಕೆ.ಸವಣೂರು ಹೇಳಿದರು.

ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸವಣೂರು ವಲಯ ಇದರ ವತಿಯಿಂದ ಕಾಣಿಯೂರು ಸರಕಾರಿ ಪ್ರೌಢ ಶಾಲೆಯ ರಾಷ್ಟ್ರೀಯ ಸೇವಾ ಯೋಜನೆಯ ಸಹಕಾರದೊಂದಿಗೆ ಕಾಣಿಯೂರು ಸರಕಾರಿ ಪ್ರೌಢ ಶಾಲೆಯಲ್ಲಿ ಫೆ 25 ರಂದು ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿ ಜೀವನದ ದೆಸೆಯಿಂದಲೇ ಉತ್ತಮ ಕ್ರಿಯಾಶೀಲ ಹವ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಸಮಾಜ ಕಟ್ಟುವ ಕಾರ್ಯಕ್ರಮಗಳಿಗೆ ದೃಢ ಸಂಕಲ್ಪ ಕೈಗೊಳ್ಳಬೇಕು. ಆದರ್ಶ ವ್ಯಕ್ತಿತ್ವದೊಂದಿಗೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಹಿರಿಯರ ಮಾರ್ಗದರ್ಶನದಲ್ಲಿ ಯುವ ಜನತೆ ಸಾಗಿದಾಗ ಸಂಸ್ಕಾರಯುತ ಜೀವನ ನಿರ್ಮಾಣವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳಂದೂರು ಒಕ್ಕೂಟದ ಅಧ್ಯಕ್ಷ ಶೇಷಪ್ಪ ಅಬೀರ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವುದರಿಂದ ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ನಿತ್ಯ ನಿರಂತರವಾಗಿ ಅನೇಕ ಸಮಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಧರ್ಮಸ್ಥಳ ಟ್ರಸ್ಟಿನ ಕಾರ್ಯ ಶ್ಲಾಘನೀಯ ಎಂದರು.

ಕಾಣಿಯೂರು ಸರಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಉಷಾಕಿರಣರವರು ಕಾರ್ಯಕ್ರಮ ಉದ್ಘಾಟಿಸಿ ಮಾತಮಾಡಿ, ಸಮಾಜದ ಸ್ವಾಸ್ಥ್ಯ ನಿರ್ಮಿಸಲು ಸದಾ ಜಾಗೃತರಾಗಬೇಕು ಎಂದರು.

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾಣಿಯೂರು ಒಕ್ಕೂಟದ ಸುಲೋಚನಾ ಅನಿಲ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಯೋಜನೆಯ ಸವಣೂರು ವಲಯ ಮೇಲ್ವೀಚಾರಕಿ ಹರ್ಷ ಸ್ವಾಗತಿಸಿ, ವಂದಿಸಿದರು. ಕಾಣಿಯೂರು ಸೇವಾಪ್ರತಿನಿಧಿ ಕಾವ್ಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here