







ಪುತ್ತೂರು: ಸರ್ವೆ ವಲಯ ಕಾಂಗ್ರೆಸ್ ಸಮಾವೇಶ ಫೆ.26ರಂದು ಕಲ್ಪಣೆ ಸಮುದಾಯ ಭವನದಲ್ಲಿ ಸರ್ವೆ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಡಿ ವಸಂತ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.






ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ಸಹಿತ ಪಕ್ಷದ ರಾಜ್ಯ ನಾಯಕರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಲಯ ನಾಯಕರು, ಬೂತ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಸರ್ವೆ ವಲಯ ಅಧ್ಯಕ್ಷರಾದ ಎಸ್. ಡಿ ವಸಂತ, ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಸುಲ್ತಾನ್ ಕೂಡುರಸ್ತೆ ಹಾಗೂ ರಾಮಚಂದ್ರ ಸೊರಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









