ಪುತ್ತೂರು: ಹೆಚ್‌ಪಿಆರ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಮತ್ತು ಪಾರಾಮೆಡಿಕಲ್ ಸಯನ್ಸ್‌ಸ್ ಕಾಲೇಜಿನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಅಂಗವಾಗಿ ಕಾನೂನು ಮಾಹಿತಿ ಕಾರ್ಯಾಗಾರ ನಡೆಯಿತು.
ಪುತ್ತೂರು ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶ ಶಿವಣ್ಣ ಎಚ್.ಆರ್. ಕಾರ್ಯಕ್ರಮ ಉದ್ಘಾಟಿಸಿದರು. ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ. ಅಧ್ಯಕ್ಷತೆ ವಹಿಸಿದ್ದರು. ವಕೀಲರಾದ ಭಾಸ್ಕರ ಕೋಡಿಂಬಾಳ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಎಚ್‌ಪಿಆರ್ ಕಾಲೇಜಿನ ಪ್ರಾಂಶುಪಾಲೆ ಇವ್ನೀಸ್ ಡಿ.ಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ರೇಣುಕಾ ಜಿ. ಸ್ವಾಗತಿಸಿದರು. ಪ್ಯಾರಾ ಲೀಗಲ್ ವಾಲಂಟಿಯರ್ ನಯನಾ ರೈ ಕಾರ್ಯಕ್ರಮ ನಿರೂಪಿಸಿದರು.