ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ

0

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ಶ್ರೀ ದೇವರ ಪ್ರತಿಷ್ಠಾ ಮಹೋತ್ಸವದಂಗವಾಗಿ ಫೆ.25ರಂದು ಬೆಳಗ್ಗೆ ಉತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.


ಪೂರ್ವಾಹ್ನ ಗಣಪತಿ ಹೋಮ, ಶತರುದ್ರಾಭಿಷೇಕ, ಸೀಯಾಳಾಭಿಷೇಕ, ಚಂಡಿಕಾ ಹೋಮ ನಡೆದು, ಅನ್ನ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕರುಣಾಕರ ಸುವರ್ಣ, ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಸಮಿತಿಯ ಸದಸ್ಯರಾದ ಜಯಂತ ಪೊರೋಳಿ, ಹರೀಶ್ ಉಪಾಧ್ಯಾಯ, ಹರಿರಾಮಚಂದ್ರ, ಸುನಿಲ್ ಎ., ಮಹೇಶ್ ಜಿ., ರಾಮ ನಾಯ್ಕ್, ಶ್ರೀಮತಿ ಹರಿಣಿ ಕೆ., ಶ್ರೀಮತಿ ಪ್ರೇಮಲತಾ, ದೇವಾಲಯದ ವ್ಯವಸ್ಥಾಪಕರಾದ ವೆಂಕಟೇಶ್ ರಾವ್, ಪದ್ಮನಾಭ ಕುಲಾಲ್, ಕೃಷ್ಣ ಪ್ರಸಾದ್ ಬಡಿಲ, ದಿವಾಕರ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here