ಕಾವು: ಭಾರತ ಸರಕಾರದ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕಾವು ನನ್ಯ ತುಡರ್ ಯುವಕ ಮಂಡಲದ 12ನೇ ವರ್ಷದ ವಾರ್ಷಿಕೋತ್ಸವ-ತುಡರ್ ಹಬ್ಬ ಕಾರ್ಯಕ್ರಮ ಮತ್ತು ಸುಬ್ರಾಯ ಬಲ್ಯಾಯರ ಪ್ರಾಯೋಜಕತ್ವದ ಕಟೀಲು ಮೇಳದ ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರಿಕೆ ಬಿಡುಗಡೆಯು ಫೆ.24 ರಂದು ಸಂಜೆ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಕಾರ್ಯಕ್ರಮದ ಯಶಸ್ವಿಗಾಗಿ ಕಾವು ಶ್ರೀ ಪಂಚಲಿಂಗೇಶ್ವರ ದೇವರಿಗೆ ಸೋಮವಾರ ಪೂಜೆ ಸಲ್ಲಿಸಿ ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ದೇವಳದ ಪ್ರಧಾನ ಅರ್ಚಕ ಶಿವಪ್ರಸಾದ್ ಕಡಮಣ್ಣಾಯರವರು ಪೂಜೆ ನೆರವೇರಿಸಿ ಪ್ರಸಾದ ನೀಡಿದರು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ರಾವ್ ನಿಧಿಮುಂಡರವರು ಕಾರ್ಯಕ್ರಮದ ಯಶಸ್ಸಿಗಾಗಿ ಶ್ರೀದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೇವಳದ ಪವಿತ್ರಪಾಣಿ ನನ್ಯ ಅಚ್ಚುತ ಮೂಡೆತ್ತಾಯರವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ತುಡರ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುಬ್ರಾಯ ಬಲ್ಯಾಯ, ಅಧ್ಯಕ್ಷ ಜಗದೀಶ ನಾಯ್ಕ ಆಚಾರಿಮೂಲೆ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಆಚಾರ್ಯ ನನ್ಯ, ಉಪಾಧ್ಯಕ್ಷ ಶ್ರೀಕುಮಾರ್ ಬಲ್ಯಾಯ, ಕೋಶಾಧಿಕಾರಿ ಹರೀಶ್ ಕೆರೆಮೂಲೆ, ಸಂಘಟನಾ ಕಾರ್ಯದರ್ಶಿ ರಾಮಣ್ಣ ನಾಯ್ಕ ಆಚಾರಿಮೂಲೆ, ಭಜನಾ ಸಂಘದ ಅಧ್ಯಕ್ಷ ಸಂಕಪ್ಪ ಪೂಜಾರಿ ಚಾಕೋಟೆ, ಮಾಜಿ ಅಧ್ಯಕ್ಷ ಸುನೀಲ್ ನಿಧಿಮುಂಡ, ಸದಸ್ಯರಾದ ಭವಿತ್ ರೈ ಮದ್ಲ, ನಿರಂಜನ ರಾವ್ ಕಮಲಡ್ಕ, ಹರ್ಷಿತ್ ಎ.ಆರ್. ರವರು ಭಾಗವಹಿಸಿದ್ದರು.
ಮಾ.24ರಂದು ಕಾರ್ಯಕ್ರಮ
ತುಡರ್ ಯುವಕ ಮಂಡಲದ 12ನೇ ವಾರ್ಷಿಕೋತ್ಸವ-ತುಡರ್ ಹಬ್ಬ ಕಾರ್ಯಕ್ರಮವು ಮಾ.24ರಂದು ಕಾವು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವದ ಎರಡನೇ ದಿನದ ಸುಸಂದರ್ಭದಲ್ಲಿ ಸಂಜೆ ಗಂಟೆ 7ರಿಂದ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.