ಆರೋಗ್ಯ ಇಲಾಖೆ, ನಗರಸಭೆ ಜಂಟಿ ಕಾರ್ಯಾಚರಣೆ – ಹೊಟೇಲ್‌ಗಳಲ್ಲಿ ಅನಿರೀಕ್ಷಿತ ಸ್ವಚ್ಛತಾ ಪರಿಶೀಲನೆ

0

ಪುತ್ತೂರು: ಸಾಂಕ್ರಾಮಿಕ ಕಾಯಿಲೆಗಳು ಹರಡುತ್ತಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಮತ್ತು ನಗರಸಭೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಪುತ್ತೂರು ಪೇಟೆಯಲ್ಲಿ ವಿವಿಧ ಹೊಟೇಲ್‌ಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಕಳೆದ ಕೆಲವು ದಿನಗಳಿಂದ ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರ ನೇತೃತ್ವದಲ್ಲಿ ನಗರಸಭೆ ಆರೋಗ್ಯ ವಿಭಾಗದ ಹಿರಿಯ ಆರೋಗ್ಯ ನಿರೀಕ್ಷಕಿ ಶ್ವೇತಾ ಕಿರಣ್ ಮತ್ತು ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚಣೆ ನಡೆಸಿ ಹೊಟೇಲ್‌ಗಳಲ್ಲಿ ಯಾವ ರೀತಿ ಸ್ವಚ್ಛತೆ ಕಾಪಾಡಿಕೊಂಡು ಗ್ರಾಹಕರಿಗೆ ಸೇವೆ ನೀಡಲಾಗುತ್ತಿದೆ ಎನ್ನುವುದನ್ನು ತಿಳಿದುಕೊಳ್ಳಲು ಕಾರ್ಯಾಚರಣೆ ಕೈಗೊಂಡಿದ್ದರು.

ಸ್ವಚ್ಛತೆಯ ಬಗ್ಗೆ ಖುದ್ದು ತಿಳಿದುಕೊಂಡು ನಿರ್ಲಕ್ಷ್ಯ ವಹಿಸಿದ್ದ ಮಾಲೀಕರುಗಳಿಗೆ ಎಚ್ಚರಿಕೆ ನೀಡಿದ್ದರು. ಇಷ್ಟಾದರೂ ಹೊಟೇಲ್‌ಗಳು ಸ್ವಚ್ಛತೆ ಕಾಪಾಡಿರಲಿಲ್ಲ. ಈ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಫೆ.28ರಂದು ತಾಲೂಕು ಆರೋಗ್ಯಾಧಿಕಾರಿ ಮತ್ತು ನಗರಸಭೆ ಅಧಿಕಾರಿಗಳು ಪ್ರಮುಖ ಹೊಟೇಲ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದರು.

ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಹೊಟೇಲ್, ಮುರದಲ್ಲಿನ ಹೊಟೇಲ್‌ಗಳಿಗೆ ದಾಳಿ ನಡೆಸಿದರು.

LEAVE A REPLY

Please enter your comment!
Please enter your name here