ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದೃಢಕಲಶ

0

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದೃಡಕಲಶ ನಡೆಯಿತು. ಬಳಿಕ ಬ್ರಹ್ಮಕಲಶೋತ್ಸವದ ಲೆಕ್ಕ ಪತ್ರವನ್ನು ಮಂಡನೆ ಮಾಡಲಾಯಿತು.

ಬ್ರಹ್ಮಕಲಶೋತ್ಸವ ಉಳಿಕೆಯಾದ ಮೂರು ಲಕ್ಷದ ಹದಿನಾರು ಸಾವಿರ ರೂಪಾಯಿಯನ್ನು ಕ್ಷೇತ್ರದ ಆಡಳಿತ ಮೊಕ್ತೇಸರರಾದ ಸುರೇಶ್ ಕೆ.ಎಸ್.ಮುಕ್ಕುಡರವರಿಗೆ ಹಸ್ತಾಂತರ ಮಾಡಲಾಯಿತು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಪ್ರಧಾನ ಕಾರ್ಯದರ್ಶಿ ಪ್ರಪುಲ್ಲ ಚಂದ್ರ ಪಿ.ಜಿ. ಕೋಲ್ಪೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದೇಜಪ್ಪ ಕೋಲ್ಪೆ, ವಿಜಯ ಸೂರ್ಯ, ವಿ.ಕೆ.ಕುಟ್ಟಿ, ಶಶಿಪ್ರಭ, ಉಷಾ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here