




ಪುತ್ತೂರು: ಶಾಂತಿಗೋಡು ಗ್ರಾಮದ ಆನಡ್ಕದ ಮುಂಡೋಡಿಯಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದಿರುವ ಘಟನೆ ಮಾ.1ರಂದು ನಡೆದಿದೆ.



ಆನಡ್ಕ ದಾಮೋದರ ಬಲ್ಯಾಯ ಎಂಬವರಿಗೆ ಸೇರಿದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಜಾಗದ ಸಮೀಪದಲ್ಲಿಯೇ ವಿದ್ಯುತ್ ಟ್ರಾನ್ಸ್ ಫಾರ್ಮರ್ ಇದ್ದು ಅದರಲ್ಲಿ ದೊಡ್ಡದಾದ ಶಬ್ದ ಉಂಟಾಗಿದ್ದು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಬಿದ್ದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.





ಅಗ್ನಿಶಾಮಕ ದಳ ಸಿಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.








