ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0

ಕಡಬ: ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಕಡಬ ತಾಲೂಕಿನ ರಾಮಕುಂಜ ಗ್ರಾಮದ ವೆಂಕಪ್ಪ ಪೂಜಾರಿ ಎಂಬವರ ಪುತ್ರ ಕಿಶೋರ್ ಎಂಬಾತನನ್ನು ಕಡಬ ಠಾಣಾ ಹೆಚ್.ಸಿ ರಾಜುನಾಯ್ಕ ಮತ್ತು ಪಿಸಿ ಸಿರಾಜುದ್ದಿನ್ ಅವರು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ೧೫ ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here